ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ

25 YERRISWAMY 07
Published on

ಬಳ್ಳಾರಿ : ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರ ಸಂವಿಧಾನಿಕ ನಡೆ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಷಡ್ಯಂತರ ಖಂಡಿಸಿ, ಇಲ್ಲಿನ ಡಿಸಿ ಕಚೇರಿ ಮುಂಭಾಗದ ಗಾಂಧಿ ಪ್ರತಿಮೆ ಬಳಿ ಜಿಲ್ಲಾ ಕರ್ನಾಟಕ ಶೋಷಿತ ಸಮುದಾಯಗಳ ಒಕ್ಕೂಟದಿಂದ ಕಪ್ಪು ಬಟ್ಟೆ ಧರಿಸಿ ಶಾಂತಿಯುತ ಪ್ರತಿಭಟನೆ ಬುಧವಾರ ನಡೆಸಿದರು.
ಅಪರೇಷನ್ ಕಮಲ ಮಾಡುವ ಹುನ್ನಾರದಿಂದ ಸಿಎಂ ರಾಜೀನಾಮೆಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪಟ್ಟು ಹಿಡಿದ್ದಾರೆ. ರಾಜ ಭವನವನ್ನು ಬಿಜೆಪಿಯ ಕೇಂದ್ರ ಕಚೇರಿ ಮಾಡಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಪರ ರಾಜ್ಯಾದ್ಯಂತ ಕೋಟ್ಯಾಂತರ ಜನರು ಇದ್ದಾರೆ. ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ. ಬಿಜೆಪಿ ಇಲ್ಲದ ರಾಜ್ಯಗಳಲ್ಲಿ ರಾಜ್ಯಪಾಲರ ಮೂಲಕ ಆಸ್ತಿರಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಇಂತಹ ಯಾವುದೇ ಷಡ್ಯಂತ್ರಕ್ಕೆ ಸಿಎಂ ಎದುರುವುದಿಲ್ಲ ಎಂದು ಪ್ರತಿಭಟನ ನಿರತರ ಮುಖಂಡರು ಆರೋಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net