ರಾಜ್ಯಪಾಲರ ನಡೆ ವಿರೋಧಿಸಿ ಪ್ರತಿಭಟನೆ

Ahinda
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 48;
Published on

ಚಿತ್ರದುರ್ಗ: ಅಹಿಂದ ನಾಯಕ, ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ರಾಜ್ಯ ಶೋಷಿತ ಸಮುದಾಯಗಳ ಮಹಾಒಕ್ಕೂಟ, ಹಿಂದುಳಿದ ಜಾತಿಗಳ ಒಕ್ಕೂಟದ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ಒನಕೆ ಓಬವ್ವ ವೃತ್ತದಲ್ಲಿ ಬಿಜೆಪಿ-ಜೆಡಿಎಸ್ ನಾಯಕರು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ಹೊರಹಾಕಿದರು. ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಎಂಬುದಾಗಿ ಧಿಕ್ಕಾರ ಕೂಗಿದರು.

ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ರಾಜ್ಯವನ್ನು ಹಸಿವು ಮುಕ್ತವಾಗಿಸಲು ಹೊರಟಿರುವುದು ಬಿಜೆಪಿಗೆ ಸಹಿಸಲು ಆಗುತ್ತಿಲ್ಲ. ಹೀಗಾಗಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸುತ್ತಿದ್ದಾರೆ. ಆ ರೀತಿಯಾದರೆ, ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಒಕ್ಕೂಟದ ರಾಜ್ಯ ಸಂಚಾಲಕ ಬಿ.ಟಿ.ಜಗದೀಶ್, ಜಿಲ್ಲಾಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ಮುಖಂಡರಾದ ಎಚ್.ಮಂಜಪ್ಪ, ಡಿ.ಎನ್.ಮೈಲಾರಪ್ಪ, ಸಂಪತ್, ಎನ್.ಡಿ.ಕುಮಾರ್, ಎಸ್.ಎನ್.ರವಿಕುಮಾರ್, ಸೈಯದ್ ಖುದ್ದೂಸ್, ಮಾಳೇಶ್, ರಾಜಣ್ಣ, ಪ್ರಕಾಶ್ ರಾಮನಾಯ್ಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net