ರಾಜ್ಯಪಾಲರ ಭೇಟಿ ಮಾಡಿದ ಬೆಲ್ದಾಳೆ

dinada chitra
Published on

ಬೀದರ್: ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ಬೆಂಗಳೂರಿನಲ್ಲಿ ಗುರುವಾರ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿ, ದಕ್ಷಿಣ ಕ್ಷೇತ್ರದಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿನ ಸಮಸ್ಯೆಗಳ ಕುರಿತು ಚರ್ಚಿಸಿದರು. ಕಮಠಾಣ ಗ್ರಾಮದ ಹೊರವಲಯದಲ್ಲಿರುವ ರಾಜ್ಯದ ಏಕೈಕ ಪಶು ವೈದ್ಯಕೀಯ ವಿಶ್ವವಿದ್ಯಾಲಯ ಇದಾಗಿದ್ದು, ಇಲ್ಲಿ ಹಲವು ಸಮಸ್ಯೆಗಳಿವೆ. ಒಟ್ಟು 2620 ಹುದ್ದೆ ಖಾಲಿಯಾಗಿದ್ದು, ಭರ್ತಿ ಮಾಡುವ ಕುರಿತು ಮತ್ತು ಅಲ್ಲಿನ ಮೂಲಸೌಕರ್ಯ ಕೊರತೆ, ಭೋಜನಾಲಯ ಕಟ್ಟಡ ಸೋರಿಕೆ ಬಗ್ಗೆ ರಾಜ್ಯಪಾಲರ ಗಮನಕ್ಕೆ ಬೆಲ್ದಾಳೆ ಅವರು ತಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net