ರಾಜ್ಯಪಾಲರ ವಿರುದ್ಧ ಹೇಳಿಕೆ ಖಂಡಿಸಿ, ಪ್ರತಿಭಟನೆ

22 YERRISWAMY 02
Published on

ಬಳ್ಳಾರಿ : ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪಕ್ಷದ ನಾಯಕರ ಅವಹೇಳನ ಹೇಳಿಕೆ ಖಂಡಿಸಿ, ಜಿಲ್ಲಾ ಬಿಜೆಪಿ ಘಟಕವು ನಗರದ ರಾಯಲ್ ವೃತ್ತದಿಂದ ಡಿಸಿ ಕಚೇರಿಯವರೆಗೆ ರ‌್ಯಾಲಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ಕುಮಾರ ಮೋಕ ಮಾತನಾಡಿ, ರಾಜ್ಯಾದ್ಯಂತ ಎಲ್ಲ ರೀತಿಯ ಹಗರಣಗಳು ಈ ಕಾಂಗ್ರೆಸ್ ಪಕ್ಷದಲ್ಲಿ ನಡೆದಿವೆ. ಸಿಎಂ ರಾಜಿನಾಮೆ ನೀಡುವುದಿಲ್ಲ ಎಂಬ ಭಂಡತನ ತೋರುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಮುಡಾ ಹೆಸರಿನಲ್ಲಿ ಹಣ ಲೂಟಿ ಮಾಡಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷ ಈಗ ರಾಜ್ಯದಲ್ಲಿ ಯಾವ ಕಾರಣಕ್ಕಾಗಿ ಪ್ರತಿಟನೆ ನಡೆಸುತ್ತಿದೆ ಎಂಬುದು ತಿಳಿಯುತ್ತಿಲ್ಲ. ಪ್ರಜಾಪ್ರಭುತ್ವದಲ್ಲಿ ಭ್ರಷ್ಟ ಸಿಎಂ ಎಂಬ ಪ್ರಶಸ್ತಿ ಸಿದ್ದರಾಮಯ್ಯಗೆ ಅವರಿಗೆ ನೀಡಬೇಕು. ಭಾರತದ ಪ್ರಜಾಪ್ರಭುತ್ವದಲ್ಲಿ ಕಳ್ಳರಿಗೆ ಅವಕಾಶವಿಲ್ಲ. ವಾಲ್ಮೀಕಿ ಹಗರಣದಲ್ಲಿ 87ಕೋಟಿ ಹಗರಣ ನಡೆದಿದೆ ಎಂದು ಒಪ್ಪಿಕೊಂಡಿದ್ದೀರಿ. ನೀವು ಹಣಕಾಸು ಸಚಿವರಾಗಿರುವುದರಿಂದ ನೈತಿಕ ಹೊಣೆ ಹೊತ್ತು ಮಾನ ಮರ್ಯಾದೆ ಇದ್ದರೆ ರಾಜೀನಾಮೆ ನೀಡಿ ತನಿಖೆಗೆ ಸಹಕಾರ ನೀಡಬೇಕು ಎಂದು ಒತ್ತಾಯಿಸಿದರು.
ರಾಯಲ್ ವೃತ್ತದಲ್ಲಿ ಬಿಜೆಪಿಯ ನೂರರು ಕಾರ್ಯಕರ್ತರು ಮಾನವ ಸರಪಳಿ ರಚಿಸಿ ಪ್ರತಿಭಟಿಸಿದ್ದರಿಂದ ಕೆಲ ಕಾಲ ಟ್ರಾಫಿಕ್ ಸಮಸ್ಯೆಯಿಂದ ವಾಹನ ಸವಾರರು ಪರದಾಡುವಂತೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net