ರಾಜ್ಯಪಾಲರನ್ನು ವಜಾಗೊಳಿಸಲು ವಕೀಲರ ಒತ್ತಾಯ

Lawyers
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.53968257, 0.5234644);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 37;
Published on

ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಜಿಲ್ಲಾ ವಕೀಲರ ಬಳಗದ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು.

30-40 ವರ್ಷಗಳ ಹಳೆಯ ಸಿವಿಲ್ ಸ್ವರೂಪದ ಪ್ರಕ್ರಿಯೆ ಸಂಬಂಧ ರಾಜ್ಯಪಾಲರು ಸಿಎಂ ವಿರುದ್ಧ ದುರುದ್ದೇಶ ಪೂರ್ವಕವಾಗಿ ಪ್ರಾಸುಕ್ಯೂಷನ್‌ಗೆ ಅನುಮತಿ ನೀಡಿದ್ದು, ಅವರನ್ನು ವಜಾಗೊಳಿಸಲು ರಾಷ್ಟ್ರಪತಿಗೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿದರು.

ರಾಜಭವನ ರಾಜಕೀಯ ಭವನವಾಗಿ ಪರಿವರ್ತನೆಗೊಂಡಿದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ಆಗಿದ್ದಾರೆ. ಸಿದ್ದರಾಮಯ್ಯ ಆಡಳಿತ ಸಹಿಸದೆ, ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸುವ ಹುನ್ನಾರ ಬಿಜೆಪಿಯಿಂದ ನಡೆಯುತ್ತಿದೆ ಎಂದು ದೂರಿದರು.

ರಾಜ್ಯ ಸರ್ಕಾರ ಮೂಡಾ ಹಗರಣವನ್ನು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆ ನಡೆಸುತ್ತಿರುವಾಗಲೇ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಎಷ್ಟು ಸರಿ. ಇದಕ್ಕೆ ಕಾರಣರಾದವರು, ಸಹಕರಿಸಿದವರ ವಿರುದ್ಧ ಸುಪ್ರಿಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು ಎಂದು ಕೋರಿದರು.

ಬಳಗದ ಸಂಚಾಲಕ ಶಿವುಯಾದವ್, ಪದಾಧಿಕಾರಿಗಳಾದ ತಿಮ್ಮಣ್ಣ, ರವೀಂದ್ರ, ವಿಜಯಕುಮಾರ್, ಜೀವನ್, ತಿಪ್ಪೇಸ್ವಾಮಿ, ಜಗನ್ನಾಥ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net