ರಾಜ್ಯಮಟ್ಟಕ್ಕೆ ಆಯ್ಕೆ

5555555555 (1)
Published on

ಧಾರವಾಡ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯು ನಗರದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಗಳಲ್ಲಿ ತಾಲೂಕಿನ ಮನಗುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಹೇಶ ಕಲ್ಲಾಗೌಡತಿ ೧೦೦ ಮೀ. ಓಟ ಹಾಗೂ ಉದ್ದಜಿಗಿತ ಸ್ಪರ್ಧೆಯಲ್ಲಿ ಹಾಗೂ ಶಂಕರ ಮರೇವಾಡ ೬೦೦ ಮೀ. ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಶಾಲೆಯ ರಿಲೇ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯÁಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net