ರಾಜ್ಯಮಟ್ಟದ ಟೆಕ್ವಾಂಡೋ ಪಂದ್ಯಾವಳಿ

DSC_0155--05
Published on

ಚಿತ್ರದುರ್ಗ: ನಗರದ ಕೆಇಬಿ ಸಮುದಾಯ ಭವನದಲ್ಲಿ ಜು. 22, 23ರಂದು ಕರ್ನಾಟಕ ಮತ್ತು ಚಿತ್ರದುರ್ಗ ಟೆಕ್ವಾಂಡೋ ಸಂಘದಿಂದ 38ನೇ ರಾಜ್ಯಮಟ್ಟದ ಸಬ್ ಜ್ಯೂನಿಯರ್, ಕೆಡಿಟ್, ಜ್ಯೂನಿಯರ್ ಹಾಗೂ ಸೀನಿಯರ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಡಾ.ಜೆ.ತಿರುಮಾಲ್ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ 18 ಜಿಲ್ಲೆಗಳ ಬಾಲಕ-ಬಾಲಕಿಯರ ಪ್ರತ್ಯೇಕ ವಿಭಾಗ ಸೇರಿ 800ರಿಂದ 1 ಸಾವಿರ ಕ್ರೀಡಾಪಟುಗಳು ಸ್ಪರ್ಧಿಸಲಿದ್ದಾರೆ. ಆಂಧ್ರಪ್ರದೇಶ, ಗೋವಾ, ತಮಿಳುನಾಡು ಸೇರಿ ಅನ್ಯ ರಾಜ್ಯದಿಂದಲೂ ರೆಫ್ರಿಗಳನ್ನು ಕರೆಸಲಾಗುತ್ತಿದೆ. ವಸತಿ, ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಇಲ್ಲಿ ಜಯಗಳಿಸಿದವರು ರಾಷ್ಟ್ರಮಟ್ಟದಲ್ಲಿ ಸ್ಪರ್ಧಿಸಲು ಉಚಿತ ಪ್ರಯಾಣದ ಸೌಲಭ್ಯ ನೀಡಲಾಗುವುದು ಎಂದರು.

*22ರಂದು ಉದ್ಘಾಟನೆ:

22ರ ಬೆಳಗ್ಗೆ 10.30ಕ್ಕೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಪಂದ್ಯಾವಳಿ ಉದ್ಘಾಟಿಸುವರು. ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಅಧ್ಯಕ್ಷತೆ ವಹಿಸುವರು. ಎಂಎಲ್ಸಿ ಕೆ.ಎಸ್.ನವೀನ್, ಡಿಸಿ ಜಿ.ಆರ್.ಜೆ.ದಿವ್ಯಾಪ್ರಭು, ಎಸ್‌ಪಿ ಕೆ.ಪರಶುರಾಮ್, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ಎಂ.ನೆಲವಗಿ, ಉದ್ಯಮಿ ಎಸ್.ವಿ.ವಿಜಯಣ್ಣ, ಸಂಘದ ಉಪಾಧ್ಯಕ್ಷ ಸೈಯದ್ ಮನ್ಸೂರ್, ಕಾರ್ಯದರ್ಶಿ ಬಿ.ಎನ್.ವೆಂಕಟೇಶ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇದೇ ವೇಳೆ ರಾಷ್ಟ್ರಮಟ್ಟದ ಪದಕ ವಿಜೇತರಿಗೆ ಸನ್ಮಾನಿಸಲಾಗುವುದು ಎಂದು ತಿಳಿಸಿದರು. ಸಂಘದ ಪದಾಧಿಕಾರಿಗಳಾದ ಅನಿತಾ, ಸುನೀತಾ, ಸರಿತಾ, ದೇವರಾಜು, ಪ್ರವೀಣ್‌ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net