ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ ತೃತೀಯ ಸ್ಥಾನ

CTD M.RAMANJINI...
Published on

ಚಿತ್ರದುರ್ಗ:ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಅಂಗವಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮೊ ಳಕಾಲ್ಮೂರು ತಾಲೂಕು ಮುರುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 7ನೇ ತರಗತಿ ವಿದ್ಯಾರ್ಥಿ ಎಂ.ರಾಮಾಂಜಿನಿ ತೃತೀಯ ಸ್ಥಾನ ಪಡೆದಿ ದ್ದಾರೆ. ರಾಜ್ಯದ ಬೆಂಗಳೂರು, ಮೈಸೂರು,ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿಭಾಗಗಳಲ್ಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಬೆಂಗಳೂರು ವಿಭಾಗದ ಪ್ರಾಥಮಿಕ ವಿಭಾಗದಲ್ಲಿ ರಾಮಾಂಜಿನಿ ಆಯ್ಕೆಯಾಗಿದ್ದಾರೆ ಎಂದು ಡಯಟ್ ನೋಡಲ್ ಅಧಿಕಾರಿ ಎಸ್.ಬಸವರಾಜು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net