ರಾಜ್ಯಮಟ್ಟದ ಸ್ಕೇಟಿಂಗ್‌ನಲ್ಲಿ ಚಿನ್ಮಯ್ ಸಾಧನೆ

4-pnp 3
ರಾಜ್ಯಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ವಿಜೇತರಾದ ಪಿಎಸ್‌ಎಸ್‌ಕೆ ಪ್ರೌಢಶಾಲೆ ವಿದ್ಯಾರ್ಥಿ ಚಿನ್ಮಯ್ ಗಣ್ಯರಿಂದ ಚಿನ್ನದ ಪದಕ ಮತ್ತು ಪ್ರಮಾಣ ಪತ್ರ ಸ್ವೀಕರಿಸುತ್ತಿರುವುದು.
Published on

ಪಾಂಡವಪುರ: ಇಲ್ಲಿನ ಪಿಎಸ್‌ಎಸ್‌ಕೆ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಎಂ.ಚಿನ್ಮಯ್ ರಾಜ್ಯಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಇತ್ತೀಚೆಗೆ ಬೆಳಗಾವಿಯಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಚಿನ್ಮಯ್ ಸ್ಕೇಟಿಂಗ್ ಇನ್ ಲೈನ್ ವಿಭಾಗದ ರೋಡ್ ಒನ್ ಲ್ಯಾಪ್ ಹಾಗೂ ಸಾವಿರ ಮೀಟರ್‌ನಲ್ಲಿ ಪ್ರಥಮ ಸ್ಥಾನ ಹಾಗೂ 500 ಮೀಟರ್‌ನಲ್ಲಿ ದ್ವಿತೀಯ ಸ್ಥಾನ ಪಡೆದು ಮೂರು ವಿಭಾಗಗಳಿಂದ ಎರಡು ಚಿನ್ನ ಹಾಗೂ ಒಂದು ಬೆಳ್ಳಿ ಪದಕ ಪಡೆದಿದ್ದಾರೆ.

ಸ್ಪರ್ಧೆಯಲ್ಲಿ ಒಟ್ಟು 13 ಅಂಕಗಳೊಂದಿಗೆ ಪ್ರಥಮ ಸ್ಥಾನ ಗಳಿಸಿರುವ ಚಿನ್ಮಯ್, ರಾಷ್ಟ್ರ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಪಿಎಸ್‌ಎಸ್‌ಕೆ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ವಿಕ್ರಮ್‌ರಾಜೇಅರಸ್, ಗೌರವ ಕಾರ್ಯದರ್ಶಿ ಕೆ.ಆರ್.ನಂದೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎ.ಲೋಕೇಶ್, ಮುಖ್ಯ ಶಿಕ್ಷಕಿ ಬಿ.ಶೈಲಜಾ ವಿದ್ಯಾರ್ಥಿಯ ಸಾಧನೆಯನ್ನು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net