ರಾಜ್ಯಮಟ್ಟದ ಹಿಂದುಳಿದ ವರ್ಗಗಳ ಸಮಾವೇಶ

bkt-11-1
ಬಾಗಲಕೋಟೆ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಮಾಜಿ ಸಚಿವ ಎಚ್.ವೈ.ಮೇಟಿ, ಒಬಿಸಿ ಘಟಕದ ಜಿಲ್ಲಾಧ್ಯಕ್ಷ ಕಾಶಿನಾಥ ಹುಡೇದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ ಹದ್ಲಿ ಸೇರಿದಂತೆ ಇತರರು ಇದ್ದರು.
Published on

ಬಾಗಲಕೋಟೆ: ರಾಜ್ಯದಲ್ಲಿ ಮೊದಲಿನಿಂದ ಹಿಂದುಳಿದ ವರ್ಗಗಳು ವೋಟ ಬ್ಯಾಂಕ್ ಆಗಿವೆ. ಈಚೆಗಿನ ದಿನಗಳಲ್ಲಿ ಅಲ್ಪ ಸ್ವಲ್ಪ ವ್ಯತ್ಯಾಸವಾಗಿದೆ. ಎಲ್ಲವನ್ನು ಸರಿಪಡಿಸಿ ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪರ ಹಿಂದುಳಿದ ವರ್ಗಗಳ ಮತ ಒಗ್ಗೂಡಿಸಲಾಗುವುದು. ಹಾವೇರಿಯಲ್ಲಿ ಫೆಬ್ರವರಿಯಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು.
ಹುಬ್ಬಳ್ಳಿ ಅಥವಾ ಹಾವೇರಿಯಲ್ಲಿ ಸಮಾವೇಶ ಹಮ್ಮಿಕೊಳ್ಳಲು ಚರ್ಚೆ ನಡೆದಿದೆ. ನಾಯಕರು ಹಾವೇರಿ ಅಂತ ಸೂಚನೆ ನೀಡಿದ್ದಾರೆ. ಅಲ್ಲಿ ನಡೆಯುವ ಸಮಾವೇಶಕ್ಕೆ ೭-೮ ಲಕ್ಷ ಜನ ಸೇರಲಿದ್ದಾರೆ. ಕೇಂದ್ರದಿಂದ ರಾಹುಲ್ ಗಾಂಧಿ, ರಾಜ್ಯದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಜಿ.ಪರಮೇಶ್ವರ ಸೇರಿದಂತೆ ವಿವಿಧ ನಾಯಕರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇನ್ನು ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಮಟ್ಟದಲ್ಲಿ ಒಂದು ಅಗತ್ಯ ಬಿದ್ದರೆ ಎರಡು ಹಿಂದುಳಿದ ವರ್ಗಗಳ ಸಮಾವೇಶ ಹಮ್ಮಿಕೊಳ್ಳಲಾಗುವುದು. ಈ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಶಾಸಕರು, ಮಾಜಿ ಶಾಸಕರು, ಸಚಿವರು, ಹಿಂದುಳಿದ ವರ್ಗಗಳ ನಾಯಕರು ಪಾಲ್ಗೊಳ್ಳಿದ್ದಾರೆ. ಈ ಸಾರಿ ಚುನಾವಣೆಯಲ್ಲಿ ಯಶಸ್ವಿಯಾಗಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯಲು ಪ್ರಯತ್ನಿಸಲಾಗುವುದು ಎಂದರು.
೨೦೨೧ ರಲ್ಲಿ ನಾನು ಕಾಂಗ್ರೆಸ್ ಸೇರ್ಪಡೆಯಾದೆ. ನಂತರ ಒಬಿಸಿ ಜವಾಬ್ದಾರಿ ನೀಡಲಾಯಿತು. ದೇಶದಲ್ಲಿ ಒಬಿಸಿ ಮತಗಳೇ ಜಾಸ್ತಿ ಇವೆ. ಶೇ.೫೫ ಮತದಾರರು ಇದ್ದಾರೆ. ರಾಜ್ಯದಲ್ಲಿಯೂ ಇದೇ ಮಾದರಿ ಇದೆ. ದೇವರಾಜು ಅರಸು, ಎಸ್.ಬಂಗಾರಪ್ಪ, ಸಿದ್ದರಾಮಯ್ಯ ಮುಖ್ಯಮಂತ್ರಿ ಇದ್ದಾಗ ಈ ವರ್ಗಗಳಿಗೆ ಅನೇಕ ಕೊಡುಗೆ ನೀಡಿದ್ದಾರೆ. ಅವುಗಳನ್ನು ಇಂದಿಗೂ ಜನ ಸ್ಮರಿಸುತ್ತಾರೆ. ಅದೇ ರೀತಿ ಚುನಾವಣೆಯಲ್ಲಿ ಗೆದ್ದ ಬಳಿಕ ಅಽಕಾರದಲ್ಲಿ ಪಾಲುದಾರಿಕೆ ನೀಡಲು, ಅವಕಾಶ ನೀಡಲು ಭರವಸೆ ನೀಡುತ್ತಿದ್ದೇವೆ. ಅವುಗಳನ್ನು ಖಂಡಿತವಾಗಿ ಈಡೇರಿಸುತ್ತೇವೆ. ಕಾಲಮಿತಿ ಹಾಕಿಕೊಂಡು ರಾಜ್ಯವನ್ನು ಸುತ್ತಿದ್ದೇನೆ. ಟಾರ್ಗೇಟ್ ತಲುಪಲು ಶ್ರಮಿಸಲಾಗುವುದು ಎಂದು ಹೇಳಿದರು.
ಮಾಜಿ ಡಿಸಿಎಂ ಜಿ.ಪರಮೇಶ್ವರ ಅಧ್ಯಕ್ಷತೆಯಲ್ಲಿ ಪ್ರಣಾಳಿಕೆ ಸಮಿತಿ ರಚಿಸಲಾಗಿದೆ. ನಾನು ಉಪಾಧ್ಯಕ್ಷನಾಗಿದ್ದು, ಪ್ರಾಂತವಾರು ಜನರ ಸಮಸ್ಯೆ, ಬೇಡಿಕೆ ತಕ್ಕಂತೆ ಪ್ರಣಾಳಿಕೆ ಸಿದ್ಧಪಡಿಸಲಾಗುತ್ತಿದೆ. ಕಾಂಗ್ರೆಸ್ ಅಽಕಾರಕ್ಕೆ ಬಂದರೇ ಉತ್ತಮ ಆಡಳಿತ ನೀಡುವ ಭರವಸೆ ಇದೆ ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಮಾಜಿ ಸಚಿವ ಎಚ್.ವೈ.ಮೇಟಿ, ಒಬಿಸಿ ಘಟಕದ ಜಿಲ್ಲಾಧ್ಯಕ್ಷ ಕಾಶಿನಾಥ ಹುಡೇದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ ಹದ್ಲಿ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net