ರಾಜ್ಯಸರ್ಕಾರ ಅಸ್ತಿರಗೊಳಿಸುವ ಹುನ್ನಾರ

bkt-29-2
ಬಾಗಲಕೋಟೆ ನಗರದ ಜಿಲ್ಲಾಡಳಿತ ಭವನ ಎದುರು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು. ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಪರಶುರಾಮ ಕಾಂಬಳೆ, ರಮೇಶ ಅನಗವಾಡಿ, ಬಸವರಾಜ ಹಳ್ಳದಮನಿ, ಪಿ.ಎಚ್.ನೀಲನಾಯಕ, ರಾಜು ಮನ್ನಿಕೇರಿ ಇತರರು ಇದ್ದರು.
Published on

ಬಾಗಲಕೋಟೆ: ಕೇಂದ್ರ ಬಿಜೆಪಿ ಸರ್ಕಾರ ಅಸ್ಥಿರತೆಯನ್ನುಂಟು ಮಾಡುತ್ತಿದೆ ಎಂದು ಆರೋಪಿಸಿ ಹಾಗೂ ರಾಜ್ಯಪಾಲರನ್ನು ವಾಪಸ್ ಕರೆಯಿಸಿಕೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸದಸ್ಯರು ಜಿಲ್ಲಾಡಳಿತ ಭವನ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಸಮಿತಿ ಸದಸ್ಯರು ಕೇಂದ್ರ ಬಿಜೆಪಿ ಸರ್ಕಾರ ಹಾಗೂ ರಾಜ್ಯ ಪಾಲರ ವಿರುದ್ಧ ಘೋಷಣೆ ಕೂಗಿದರು. ಬಳಿಕ ಜಿಲ್ಲಾಡಳಿತ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಽಕಾರದಲ್ಲಿದೆ. ಇದನ್ನು ಸಹಿಸಿಕೊಳ್ಳಲಾಗದೇ ಬಿಜೆಪಿ, ಜೆಡಿಎಸ್ ಕೇಂದ್ರ ಸರ್ಕಾರ ಅಽಕಾರ ದುರಪಯೋಗ ಪಡಿಸಿಕೊಳ್ಳುತ್ತಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರ ಅಸ್ತಿರಗೊಳಿಸಲು ಹುನ್ನಾರ ನಡೆಸಿವೆ. ಇದಕ್ಕೆ ರಾಜ್ಯಪಾಲರನ್ನು ಬಳಸಿಕೊಳ್ಳುತ್ತಿವೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ.

ಈ ರೀತಿ ನಡೆದುಕೊಳ್ಳುತ್ತಿರುವದರಿಂದ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಧಕ್ಕೆ ಬರುತ್ತಿದೆ. ಇನ್ನು ಕೇಂದ್ರ ಸರ್ಕಾರ ಅನಗತ್ಯವಾಗಿ ಹಸ್ತಕ್ಷಪ ಮಾಡುತ್ತಿದೆ. ಕೂಡಲೇ ರಾಜ್ಯಪಾಲರನ್ನು ವಾಪಸ್ ಕರೆಯಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಪರಶುರಾಮ ಕಾಂಬಳೆ, ರಮೇಶ ಅನಗವಾಡಿ, ಬಸವರಾಜ ಹಳ್ಳದಮನಿ, ಪಿ.ಎಚ್.ನೀಲನಾಯಕ, ರಾಜು ಮನ್ನಿಕೇರಿ, ಬಸವರಾಜ ದೊಡಮನಿ, ಖಾಸೀಂ ಅಲಿ ಗೋಠೆ, ಶಿವಾನಂದ ಶಿಂಗೆ, ಹುಲ್ಲಪ್ಪ ಅಂಟರರಾಣಾ, ಸದಾಶಿವ ಐನಾಪೂರ, ಮಾರುತಿ ಚಿಕ್ಕಲಗುಂಡಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net