ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಹೋರಾಟ

19 vikram 1
Published on

ಧಾರವಾಡ: ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದ್ದ ಸರ್ಕಾರ ಕೊಟ್ಟ ಮಾತಿಗೆ ತಪ್ಪಿದೆ. ಹೀಗಾಗಿ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಸೆ. 22ರಂದು ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಬಡಿಗೇರ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ನಿರಂತರಾಗಿ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಶೀಘ್ರದಲ್ಲೇ ಬೇಡಿಕೆ ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ 2 ತಿಂಗಳಾದರೂ ಈಡೇರಿಸಿಲ್ಲ. ಹೀಗಾಗಿ ರಾಜ್ಯದ 42 ಸಾವಿರ ಆಶಾ ಕಾರ್ಯಕರ್ತೆಯರು ಎಲ್ಲ ಜಿಲ್ಲೆಗಳಲ್ಲಿ ಸಾಂಕೇತಿಕ ಹೋರಾಟ ನಡೆಸಲಿದ್ದಾರೆ ಎಂದರು.

ಸೆ. 21ರಿಂದ ಪ್ರಾರಂಭವಾಗುವ ಅಧಿವೇಶನದಲ್ಲಿ ಈ ಕುರಿತು ಚರ್ಚೆ ನಡೆಸಿ, ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಬೇಕು. ಅಗತ್ಯ ಬಿದ್ದರೆ ವಿಧಾನಸೌಧಕ್ಕೆ ಸಹ ಮುತ್ತಿಗೆ ಹಾಕುವುದು ಎಂದು ಎಚ್ಚರಿಕೆ ನೀಡಿದರು. ಸಂಘಟನೆ ಜಿಲ್ಲಾ ಉಪಾಧ್ಯಕ್ಷೆ ಭುವನಾ ಬಳ್ಳಾರಿ, ಮಂಜುಳಾ ಕೋಸುಂದರ, ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net