ಕೊಳ್ಳೇಗಾಲ: ಪಟ್ಟಣದ ವಿಶ್ವಚೇತನ ಸಮೂಹ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ವಿಶ್ವಚೇತನ ವಿದ್ಯಾಸಂಸ್ಥೆ ಹಾಗೂ ನಂ.1 ಕನ್ನಡ ದಿನಪತ್ರಿಕೆ ವಿಜಯವಾಣಿ ಸಹಯೋಗದಲ್ಲಿ ನ.28ರಂದು ಬೆಳಗ್ಗೆ 10.30ಕ್ಕೆ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮಕ್ಕೆ ಮಾನಸ ಶಿಕ್ಷಣ ಸಂಸ್ಥೆಯ ಎಸ್.ದತ್ತೇಶ್‌ಕುಮಾರ್ ಚಾಲನೆ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಎಚ್.ಕೆ.ಟ್ರಸ್ಟ್ ಕಾರ್ಯದರ್ಶಿ ಪ್ರೇಮಲತಾ ಕೃಷ್ಣಸ್ವಾಮಿ ವಹಿಸಲಿದ್ದಾರೆ. ನಿವೃತ್ತ ಶಿಕ್ಷಕ ಹಾಗೂ ಸಾಹಿತಿ ಇದ್ವಾಂಡಿ ಶಿವಣ್ಣ ಉಪನ್ಯಾಸ ನೀಡಲಿದ್ದಾರೆ. ತಾಲೂಕು ಕನ್ನಡ ಪರಿಷತ್ ಅಧ್ಯಕ್ಷ ಲಯನ್ ಎಸ್.ನಾಗರಾಜು ಕೊಂಗರಹಳ್ಳಿ ಉಪಸ್ಥಿತರಿರುವರು.
ಕಾರ್ಯಕ್ರಮಕ್ಕೆ ಎಲ್ಲ ಸಂಘ-ಸಂಸ್ಥೆಗಳು, ಕನ್ನಡ ಸಂಘಟನೆ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಎಸ್.ನಾಗರಾಜು ಕೋರಿದ್ದಾರೆ.