ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಗೈರಾದರೆ ಕ್ರಮ

klb7
ಆಳAದದಲ್ಲಿ ತಹಸೀಲ್ದಾರ್ ಅಣ್ಣಾರಾವ ಪಾಟೀಲ್ ಅಧ್ಯಕ್ಷತೆಯಲ್ಲಿ ಬುಧವಾರ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆ ಜರುಗಿತು. ಬಿಇಒ ಸಿ.ಜಿ.ಹಳ್ಳದ, ಸಮಾಜ ಕಲ್ಯಾಣ ಅಧಿಕಾರಿ ವಿಜಯಲಕ್ಷಿö್ಮÃ ಹೋಳಕರ ಇತರರಿದ್ದರು.
Published on

ಆಳಂದ: ತಾಲೂಕಿನ ಎಲ್ಲ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ನ.1ರಂದು ಕರ್ನಾಟಕ ರಾಜ್ಯೋತ್ಸವ ಸಂಭ್ರಮದಿAದ ನಡೆಸಬೇಕು ಎಂದು ತಹಸೀಲ್ದಾರ್ ಅಣ್ಣಾರಾವ ಪಾಟೀಲ್ ಹೇಳಿದರು.

ಬುಧವಾರ ತಾಲೂಕು ಆಡಳಿತ ಸೌಧದಲ್ಲಿ ಪೂರ್ವಭಾವಿ ಸಭೆ ನಡೆಸಿದ ಅವರು, ಕನ್ನಡ ಸಾಹಿತ್ಯ ಪರಿಷತ್, ವಿವಿಧ ಕನ್ನಡಪರ ಸಂಘಟನೆ ಪದಾಧಿಕಾರಿಗಳು ಹಾಗೂ ಸಾಹಿತಿಗಳನ್ನು ಒಳಗೊಂಡು ಆಚರಿಸಬೇಕು. ಸರ್ಕಾರಿ ನೌಕರರು, ಅಧಿಕಾರಿಗಳು ತಮ್ಮ ತಮ್ಮ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ ಬೆಳಗ್ಗೆ 9ಕ್ಕೆ ನಡೆಯುವ ತಾಲೂಕು ಮಟ್ಟದ ಕಾರ್ಯಕ್ರಮದಲ್ಲಿ ಕಡ್ಡಾಯ ಭಾಗವಹಿಸಬೇಕು. ಗೈರು ಹಾಜರಾಗುವವರ ವಿರುದ್ಧ ಕ್ರಮಕ್ಕೆ ಮೇಲಧಿಕಾರಿಗಳಿಗೆ ಶಿಫಾರಸು ಮಾಡುವುದಾಗಿ ಎಚ್ಚರಿಸಿದರು.

ವಿವಿಧ ಇಲಾಖೆ ಅಧಿಕಾರಿಗಳಾದ ವಿಜಯಲಕ್ಷಿö್ಮÃ ಹೋಳಕರ, ಸಿ.ಜಿ.ಹಳ್ಳದ, ಅರವಿಂದ ಭಾಸಗಿ, ಶ್ರೀಕಾಂತ ಮೇಂಗಜಿ, ಸುರೇಂದ್ರನಾಥ, ಪಿಡಬ್ಲುÈಡಿ ಎಇಇ ಆನಂದ ಕುಮಾರ, ಪುರಸಭೆಯ ಲಕ್ಷö್ಮಣ ಕಟ್ಟಿ, ಕಸಾಪ ತಾಲೂಕು ಅಧ್ಯಕ್ಷ ಹಣಮಂತ ಶೇರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net