ರಾಧಾಕೃಷ್ಣ ನಾಮಪತ್ರ ಸಲ್ಲಿಕೆ ಏ.12ರಂದು

IMG-20240404-WA0038
Published on

ಕಲಬುರಗಿ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಶುಕ್ರವಾರ ಏಪ್ರಿಲ್ ಬೆಳಗ್ಗೆ 11ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಾಮಪತ್ರ ಸಲ್ಲಿಸಿದ ನಂತರ ನಗರದ ಎನ್ ವಿ ಕಾಲೇಜು ಮೈದಾನದಲ್ಲಿ 11.30 ಗಂಟೆಗೆ ಬಹಿರಂಗ ಸಮಾವೇಶ ಏರ್ಪಡಿಸಲಾಗಿದೆ.

ಸಭೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಾನ್ಯ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ, ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ, ಸರ್ಕಾರದ ಸಚಿವರುಗಳು, ಶಾಸಕರು, ಹಿರಿಯ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಗುತ್ತೇದಾರ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net