ರಾಧಾಕೃಷ್ಣನ್ ಆದರ್ಶ ಅಳವಡಿಸಿಕೊಳ್ಳಲಿ

web4
ರಾಮದುರ್ಗದ ಶ್ರೀಮತಿ ಈರಮ್ಮ ಶಿವಲಿಂಗಪ್ಪ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಶಾಸಕ ಅಶೋಕ ಪಟ್ಟಣ ಉದ್ಘಾಟಿಸಿದರು. ಆರ್.ಟಿ ಬಳಿಗಾರ ಇತರರಿದ್ದರು.
Published on

ರಾಮದುರ್ಗ: ದೇಶದ ಭವಿಷ್ಯ ಶಿಕ್ಷಕರ ಕೈಯಲ್ಲಿದೆ. ಶಿಕ್ಷಕರು ಜವಾಬ್ದಾರಿ ಅರಿತು ಬೋಧಿಸಿ ವಿದ್ಯಾರ್ಥಿಗಳ ಸಾಧನೆಗೆ ಪ್ರೇರಣೆ ನೀಡಬೇಕು ಎಂದು ಶಾಸಕ ಅಶೋಕ ಪಟ್ಟಣ ಹೇಳಿದರು.

ಪಟ್ಟಣ ಸಮೀಪದ ಶ್ರೀಮತಿ ಈರಮ್ಮ ಶಿವಲಿಂಗಪ್ಪ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಸಭಾಭವನದಲ್ಲಿ ತಾಲೂಕುಮಟ್ಟದ ಶಿಕ್ಷಕರ ದಿನಾಚರಣೆ, ಪ್ರತಿಭಾ ಕಾರಂಜಿ ಉದ್ಘಾಟನೆ ಹಾಗೂ ಸಾಧನೆ ಮಾಡಿದ ಶಿಕ್ಷಕ ಮತ್ತು ಸೇವಾ ನಿವೃತ್ತರಿಗೆ ಮಂಗಳವಾರ ಹಮ್ಮಿಕೊಂಡಿದ್ದ ಸತ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿ, ರಾಧಾಕೃಷ್ಣನ್ ಆದರ್ಶ ಅಳವಡಿಸಿಕೊಳ್ಳಬೇಕು ಎಂದರು.

ತಾಪಂ ಇಒ ಪ್ರವೀಣಕುಮಾರ ಸಾಲಿ ಮಾತನಾಡಿ, ನರೇಗಾ ಯೋಜನೆಯಡಿ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್, ಪೇವರ್ಸ್‌ ಸೇರಿ ರಿಪೇರಿ ಕೆಲಸ ಮಾಡಿಸಿದ್ದೇವೆ. ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಬೇಕು ಎಂದರು.

ಬಿಇಒ ಆರ್.ಟಿ ಬಳಿಗಾರ, ನಿವೃತ್ತ ಉಪನ್ಯಾಸಕ ಪ್ರೊ.ಪಿ.ಎಲ್.ಮೀಸಾಳೆ ಮಾತನಾಡಿದರು. ನಿವೃತ್ತ ಶಿಕ್ಷಕರನ್ನು ಸತ್ಕರಿಸಲಾಯಿತು. ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಲಿತಾಂಶ ಪಡೆದ ಪ್ರೌಢಶಾಲೆಗಳಿಗೆ ನೆನಪಿನ ಕಾಣಿಕೆ ನೀಡಲಾಯಿತು. ಗುರುಭವನ ನಿರ್ಮಾಣಕ್ಕೆ 4 ಲಕ್ಷ ರೂ. ದೇಣಿಗೆ ನೀಡಲಾಯಿತು. ಗ್ರಾಪಂ ಅಧ್ಯಕ್ಷೆ ಮಂಜುಳಾ ಮೆಟಗುಡ್ಡ, ಉಪಾಧ್ಯಕ್ಷ ಭರಮಪ್ಪ ಶೇಷಾದ್ರಿ, ಕ್ಷೇತ್ರ ಸಮನ್ವಯಾಧಿಕಾರಿ ಜಿ.ಸಿ.ಶೀಲವಂತಮಠ, ಅಕ್ಷರ ದಾಸೋಹದ ಬಿ.ಎ್.ಮುನವಳ್ಳಿ, ಶಿಕ್ಷಣ ಸಂಯೋಜಕ ಆನಂದತೀರ್ಥ ಜೋಶಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net