ರಾಮಪ್ಪ ಮೇಯರ್, ದುರ್ಗಮ್ಮ ಉಪ ಮೇಯರ್ ಖಚಿತ

IMG_20240629_104101
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ರಾಮಪ್ಪ ಬಡಿಗೇರ ಹಾಗೂ ಉಪ ಮೇಯರ್ ಸ್ಥಾನಕ್ಕೆ‌ ದುರ್ಗಮ್ಮ ಬಿಜವಾಡ ನಾಮಪತ್ರ ಸಲ್ಲಿಸಿದರು.

ಮೇಯರ್ ಸ್ಥಾನ ಹಿಂದುಳಿದ ವರ್ಗ ಎ ಹಾಗೂ ಉಪ ಮೇಯರ್ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದೆ.

ನೂತನ ಮೇಯರ್ ಉಪಮೇಯರ್ ಆಯ್ಕೆ‌ ಚುನಾವಣೆ ಶನಿವಾರ ಮಧ್ಯಾಹ್ನ 1ಗಂಟೆಗೆ ನಡೆಯಲಿದೆ. ಬೆಳಗ್ಗೆ 9ರಿಂದ 11 ಗಂಟೆಯವೆರೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿತ್ತು.

ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಅಗತ್ಯ ಸಂಖ್ಯಾಬಲ ಹೊಂದಿರುವುದರಿಂದ ರಾಮಪ್ಪ ಹಾಗೂ ದುರ್ಗಮ್ಮ ಮೇಯರ್ ಹಾಗೂ ಉಪ ಮೇಯರ್ ಆಗುವುದು ಖಚಿತವಾಗಿದೆ.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಉಪಸ್ಥಿತಿ ಯಲ್ಲಿ ಶುಕ್ರವಾರ ರಾತ್ರಿ ಹಾಗೂ ಶನಿವಾರ ಬೆಳಗ್ಗೆ ಕರೆದ ಪಾಲಿಕೆಯ ಬಿಜೆಪಿ ಹಾಗೂ ಬೆಂಬಲಿತ ಸದಸ್ಯರ ಸಭೆಯಲ್ಲಿ ಮೇಯರ್ ಸ್ಥಾನಕ್ಕೆ ರಾಮಪ್ಪ ಬಡಿಗೇರ ಹಾಗೂ ಉಪ ಮೇಯರ್ ಸ್ಥಾನಕ್ಕೆ ದುರ್ಗಮ್ಮ ಬಿಜವಾಡ ಹೆಸರನ್ನು ಅಂತಿಮಗೊಳಿಸಲಾಯಿತು.
ಪಾಲಿಕೆಯಲ್ಲಿ ಬಿಜೆಪಿ ಆಡಳಿತವಿದ್ದು, ಸಂಖ್ಯಾಬಲದ ಲೆಕ್ಕಾಚಾರದಲ್ಲಿ ಕಮಲ‌ ಪಡೆ ಮುಂಚೂಣಿಯಲ್ಲಿದೆ. ಒಟ್ಟು 90  ಮತಗಳಲ್ಲಿ ಬಿಜೆಪಿ 49 ಸದಸ್ಯ ಮತಗಳ ಬಲ ಹೊಂದಿದೆ. ಕಾಂಗ್ರೆಸ್ 38 ಮತಗಳನ್ನು ಹೊಂದಿದ್ದು, ಎಐಎಂಐಎಂ ನಿಂದ 3 ಸದಸ್ಯರು ಇದ್ದಾರೆ.

ಕಾಂಗ್ರೆಸ್ ನಿಂದ ಇಮ್ರಾನ್ ಎಲಿಗಾರ ಮೇಯರ್ ಸ್ಥಾನಕ್ಕೆ ಹಾಗೂ ಮಂಗಳಮ್ಮ ಹಿರೇಮನಿ ಉಪ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net