ರಾಮಪ್ಪ ಮೇಯರ್, ದುರ್ಗಮ್ಮ ಉಪ ಮೇಯರ್

IMG_20240629_133829
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಹಾಗೂ ಉಪ ಮೇಯರ್ ಆಗಿ ಬಿಜೆಪಿಯ ದುರ್ಗಮ್ಮ ಬಿಜವಾಡ ಚುನಾಯಿತರಾದರು.

ಮೇಯರ್ ಸ್ಥಾನ ಹಿಂದುಳಿದ ವರ್ಗ ಎ ಹಾಗೂ ಉಪ ಮೇಯರ್ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿತ್ತು.

ಬೆಳಗಾವಿ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟಣ್ಣವರ, ಹೆಚ್ಚುವರಿ ಆಯುಕ್ತ ಎಸ್.ಎಸ್. ಬಿರಾದಾರ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.

ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಜೆಪಿಯ ರಾಮಪ್ಪ ಬಡಿಗೇರ 47 ಕಾಂಗ್ರೆಸ್ ನ ಇಮ್ರಾನ್ ಎಲಿಗಾರ 36, ಉಪ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಜೆಪಿಯ ದುರ್ಗಮ್ಮ ಬಿಜವಾಡ 47 ಹಾಗೂ ಕಾಂಗ್ರೆಸ್ ನ ಮಂಗಳಮ್ಮ ಹಿರೇಮನಿ 36 ಮತಗಳನ್ನು ಪಡೆದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಉಪಸ್ಥಿತಿ ಯಲ್ಲಿ ಶುಕ್ರವಾರ ರಾತ್ರಿ ಹಾಗೂ ಶನಿವಾರ ಬೆಳಗ್ಗೆ ಕರೆದ ಪಾಲಿಕೆಯ ಬಿಜೆಪಿ ಹಾಗೂ ಬೆಂಬಲಿತ ಸದಸ್ಯರ ಸಭೆಯಲ್ಲಿ ಮೇಯರ್ ಸ್ಥಾನಕ್ಕೆ ರಾಮಪ್ಪ ಬಡಿಗೇರ ಹಾಗೂ ಉಪ ಮೇಯರ್ ಸ್ಥಾನಕ್ಕೆ ದುರ್ಗಮ್ಮ ಬಿಜವಾಡ ಹೆಸರನ್ನು ಅಂತಿಮಗೊಳಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net