ರಾಮಾಯಣದಲ್ಲಿ ಉದಾತ್ತ ಗುಣಗಳ ಚಿತ್ರಣ

07Rajesh2
Published on

ಚಾಮರಾಜನಗರ ಮಹರ್ಷಿ ವಾಲ್ಮೀಕಿ ರಾಮಾಯಣದಲ್ಲಿ ರಾಮನ ಉದಾತ್ತ ಗುಣಗಳನ್ನು ಚಿತ್ರಿಸುವ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ರಾಮಾಯಣದಲ್ಲಿ ಬರುವ ಪಾತ್ರಗಳು ಆದರ್ಶ ಕುಟುಂಬ ಹೇಗಿರಬೇಕು ಎಂಬ ಸಂದೇಶವನ್ನು ಅನಾವರಣಗೊಳಿಸಿವೆ. ಸಮಾಜದ ಪ್ರತಿಯೊಬ್ಬರು ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳನ್ನು ಪಾಲನೆ ಮಾಡಬೇಕು ಎಂದರು.

ಕಾಡಾ ಅಧ್ಯಕ್ಷ ಮತ್ತು ಪಕ್ಷದ ಜಿಲ್ಲಾಧ್ಯಕ್ಷ ಪಿ.ಮರಿಸ್ವಾಮಿ, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಚುಡಾ ಅಧ್ಯಕ್ಷ ಮಹಮದ್ ಅಸ್ಗರ್, ಗ್ರಾಮಾಂತರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಎ.ಎಸ್.ಗುರುಸ್ವಾಮಿ, ಮಹಿಳಾ ಘಟಕದ ಅಧ್ಯಕ್ಷೆ ನಾಗರತ್ನ, ನಗರಸಭೆ ಸದಸ್ಯರಾದ ಚಿನ್ನಮ್ಮ, ಸ್ವಾಮಿ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಬಸುಮರಿ, ಮಾದಾಪುರ ಗ್ರಾ.ಪಂ ಅಧ್ಯಕ್ಷ ರೂಪೇಶ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯ ಮರಿಯಾಲದಹುಂಡಿ ಕುಮಾರ್, ಮಾದಾಪುರ ಕುಮಾರ್, ಬೀದಿಬದಿ ವ್ಯಾಪಾರಿಗಳ ಸಂಘದ ಜಿಲ್ಲಾಧ್ಯಕ್ಷ ಅಧ್ಯಕ್ಷ ಜಬೀಉಲ್ಲಾ, ಉಪಾಧ್ಯಕ್ಷ ಅಕ್ರಂಪಾಷಾ, ಗ್ರಾಪಂ ಸದಸ್ಯ ಅಮಚವಾಡಿ ರಾಜು ಮತ್ತು ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net