ರಾಯಣ್ಣ ಕೋಟೆ ಉದ್ಘಾಟನೆ ಇಂದು

Published on

ಕೌಜಲಗಿ: ಪಟ್ಟಣದಲ್ಲಿ ಕುಲಗೋಡ ರಸ್ತೆಯಲ್ಲಿ 70 ಲ ರೂ. ವೆಚ್ಚದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕಂಚಿನ ಪ್ರತಿಮೆ, ರಾಯಣ್ಣ ಕೋಟೆ ಆ.26ರಂದು ಮುಖ್ಯಮಂತ್ರಿ ಸಿದ್ದರಾಮಯ್ಯಅವರಿಂದ ಉದ್ಘಾಟನೆಗೊಳ್ಳಲಿದೆ. ಬಾಗೋಜಿ ಕೊಪ್ಪದ ಮುರುರಾಜೇಂದ್ರ ಸ್ವಾಮೀಜಿ, ವಿಠ್ಠಲ ದೇವಋಷಿ ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ನಗರಾಭಿವದ್ಧಿ ಸಚಿವ ಬೆರತಿ ಸುರೇಶ ಮುಖ್ಯಅತಿಥಿಗಳಾಗಿ ಆಗಮಿಸುವರು. ಶಾಸಕ ಬಾಲಚಂದ್ರ ಜಾರಕಿಹೊಳಿ ಅಧ್ಯತೆ ವಹಿಸಲಿದ್ದು, ಜಿಲ್ಲೆಯ ಶಾಸಕರು, ಸಂಸದರು, ಚುನಾಯಿತ ಪ್ರತಿನಿಧಿಗಳು ಭಾಗವಹಿಸುವರು ಎಂದು ಕೌಜಲಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಷ್ಠಾಪನೆ ಸಮಿತಿಯ ಅಧ್ಯ ಡಾ.ರಾಜೇಂದ್ರ ಸಣ್ಣಕ್ಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net