ರಾಯಣ್ಣ ಪ್ರತಿಮೆ ಮರು ಸ್ಥಾಪನೆ ಮಾಡಿ

Kuruba
Published on

ಕಲಬುರಗಿ: ಬೆಳಗಾವಿ ಜಿಲ್ಲೆ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರು ಸ್ಥಾಪನೆಗೆ ಆಗ್ರಹಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾ ಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ರಾಯಣ್ಣ ಪ್ರತಿಮೆಯನ್ನು ಕೆಲ ಕಿಡಿಗೇಡಿಗಳು ತೆರವುಗೊಳಿಸಿದ್ದು ಖಂಡನೀಯ. ತಕ್ಷಣ ಈ ಸ್ಥಳದಲ್ಲಿ ಅವರ ಪ್ರತಿಮೆ ಮರು ಸ್ಥಾಪಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ರಾಜ್ಯಪಾಲರಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು.
ಸಂಘದ ಜಿಲ್ಲಾಧ್ಯಕ್ಷ ತಿಪ್ಪಣ್ಣಪ್ಪ ಗುಂಡಗುರ್ತಿ , ಪ್ರಮುಖರಾದ ದಿಲೀಪ ಪಾಟೀಲ್, ಗಿರೆಪ್ಪ ಕಟ್ಟಿಮನಿ, ಡಾ.ಬಾಬು ಪೂಜಾರಿ, ದೇವೀಂದ್ರಪ್ಪ ನಾಯ್ಕೋಡಿ, ಮಲ್ಲಿಕಾರ್ಜುನ ಪೂಜಾರಿ, ಭಗವಂತರಾಯ, ಗಣಪತಿ ಮಿಣಜಗಿ, ನಿರ್ಮಲಾ ಬರಗಾಲಿ, ನಾಗೀಂದ್ರಪ್ಪ ಪೂಜಾರಿ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net