ರಾಷ್ಟ್ರ ಧ್ವಜ ದೇಶದ ಏಕತೆಯ ಸಂಕೇತ

bhr flag
ಬಾಳೆಹೊನ್ನೂರು ಜೆಸಿಐನಿಂದ ರಾಷ್ಟ್ರೀಯ ಧ್ವಜ ದಿನ ಆಚರಿಸಲಾಯಿತು. ಇಬ್ರಾಹಿಂ ಶಾಫಿ, ಶಶಿಧರ್, ಅಶೋಕ್, ಸುರೇಂದ್ರ, ಅವಿನಾಶ್ ಇತರರಿದ್ದರು.
Published on

ಬಾಳೆಹೊನ್ನೂರು: ರಾಷ್ಟ್ರ ಧ್ವಜವು ದೇಶದ ಏಕತೆ, ಧೈರ್ಯ, ಸತ್ಯದ ಸಂಕೇತ ಎಂದು ಎನ್.ಆರ್.ಪುರ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಚೈತನ್ಯ ವೆಂಕಿ ಹೇಳಿದರು.

ಜೆಸಿಐ ಬಾಳೆಹೊನ್ನೂರು ಕ್ಲಾಸಿಕ್ ಸಂಸ್ಥೆ ಆಯೋಜಿಸಿದ್ದ ಭಾರತೀಯ ರಾಷ್ಟ್ರೀಯ ಧ್ವಜ ದಿನ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರತಿ ರಾಷ್ಟ್ರಕ್ಕೂ ತನ್ನದೇ ಆದ ಧ್ವಜವಿದ್ದು, ಭಾರತದಲ್ಲಿ ತ್ರಿವರ್ಣ ಧ್ವಜವನ್ನು ರಾಷ್ಟ್ರಧ್ವಜವಾಗಿ ಸ್ವೀಕರಿಸಲಾಗಿದೆ. ಇಂಥ ರಾಷ್ಟ್ರಧ್ವಜವನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಭಾರತ ತ್ರಿವರ್ಣ ಧ್ವಜವನ್ನು ಅಳವಡಿಸಿಕೊಂಡ ದಿನವನ್ನು ಗೌರವಿಸುವ ಸಲುವಾಗಿ ಪ್ರತಿ ವರ್ಷ ಜು.22ರಂದು ರಾಷ್ಟ್ರೀಯ ಧ್ವಜ ದಿನವನ್ನಾಗಿ ಆಚರಿಸಲಾಗುತ್ತದೆ. ರಾಷ್ಟ್ರ ಧ್ವಜ ದಿನ ಕೇವಲ ಧ್ವಜವನ್ನು ಗೌರವಿಸುವ ದಿನವಲ್ಲ. ಇದು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದ ಮೌಲ್ಯಗಳು ಮತ್ತು ತ್ಯಾಗವನ್ನು ಎಲ್ಲರೂ ಸ್ಮರಿಸಲು ಒಂದು ಅವಕಾಶವಾಗುತ್ತದೆ ಎಂದು ತಿಳಿಸಿದರು.

ಜೆಸಿಐ ಅಧ್ಯಕ್ಷ ಇಬ್ರಾಹಿಂ ಶಾಫಿ ಮಾತನಾಡಿ, ರಾಷ್ಟ್ರ ಧ್ವಜ ಭಾರತದ ಹೆಮ್ಮೆಯಾಗಿದ್ದು, ಇದು ದೇಶದ ಶ್ರೀಮಂತ ಪರಂಪರೆ, ವೈವಿಧ್ಯಮಯ ಸಂಸ್ಕೃತಿ, ಏಕತೆಯ ಕಡೆಗೆ ನಡೆಯುತ್ತಿರುವುದನ್ನು ಪ್ರತಿನಿಧಿಸುತ್ತದೆ. ರಾಷ್ಟ್ರಧ್ವಜದ ಎಲ್ಲ ಬಣ್ಣಗಳೂ ಒಂದೊಂದು ಸಂಕೇತ ಪ್ರತಿನಿಧಿಸುತ್ತಿದ್ದು, ನಮ್ಮ ಧ್ವಜ ನಮಗೆ ಹೆಮ್ಮೆಯಾಗಿದೆ ಎಂದರು.

ಜೆಸಿಐ ನಿಕಟಪೂರ್ವ ಅಧ್ಯಕ್ಷ ಎನ್.ಶಶಿಧರ್, ಕಾರ್ಯದರ್ಶಿ ವಿ.ಅಶೋಕ್, ಪೂರ್ವಾಧ್ಯಕ್ಷ ಸುರೇಂದ್ರ ಮಾಸ್ತರ್, ಅವಿನಾಶ್ ಬಿಕ್ಕರಣೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net