ರಾಷ್ಟ್ರ ಧ್ವಜ ನೀಡಿ ಹರ್ ಘರ್ ತಿರಂಗಾ ಅಭಿಯಾನ

35
Published on

ಮೈಸೂರು: ನಗರದ ಜೀವಧಾರ ರಕ್ತನಿಧಿ ಕೇಂದ್ರದಿಂದ ಸೋಮವಾರ ಗ್ರಾಹಕರಿಗೆ ಹಾಗೂ ಸಿಬ್ಬಂದಿಗೆ ರಾಷ್ಟ್ರ ಧ್ವಜ ನೀಡಿ ಹರ್ ಘರ್ ತಿರಂಗಾ ಅಭಿಯಾನ ನಡೆಸಿದರು
77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಅಭಿಯಾನದಲ್ಲಿ ಮಾತನಾಡಿದ ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ರಾಷ್ಟ್ರಧ್ವಜಕ್ಕೆ ಪ್ರತಿಯೊಬ್ಬರೂ ಗೌರವ ಸಲ್ಲಿಸಬೇಕಾಗಿದೆ. ಧ್ವಜದ ಹಿರಿಮೆ ಅರಿಯುವುದರೊಂದಿಗೆ ರಾಷ್ಟ್ರಧ್ವಜದ ಬಗ್ಗೆ ಸರಿಯಾದ ತಿಳಿವಳಿಕೆ ಹೊಂದಬೇಕಾಗಿದೆ ಎಂದು ತಿಳಿಸಿದರು.
ಧ್ವಜ ಸಂಹಿತೆಯಂತೆ ಧ್ವಜಾರೋಹಣ ಮತ್ತು ಅವರೋಹಣ ಕ್ರಮವನ್ನು ಪಾಲಿಸಬೇಕು. ವಿದ್ಯಾರ್ಥಿಗಳು ಪ್ಲಾಸ್ಟಿಕ್ ಧ್ವಜಗಳನ್ನು ಬಳಸಬಾರದು. ರಾಷ್ಟ್ರೀಯ ಭಾವೈಕ್ಯತೆ ಮತ್ತು ರಾಷ್ಟ್ರ ಪ್ರೇಮ ಮೂಡಿಸುವ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ಹರ್‌ಘರ್ ತಿರಂಗಾ ಅಭಿಯಾನ ಪ್ರಾರಂಭಿಸಿದೆ. ಅಭಿಯಾನದ ಮೂಲಕ ರಾಷ್ಟ್ರಧ್ವಜವನ್ನು ಪ್ರತಿಯೊಬ್ಬರ ಮನೆ ಮೇಲೆ ಹಾರಿಸುವಂತೆ ಮನವಿ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಜೀವಧಾರ ರಕ್ತ ನಿಧಿ ಕೇಂದ್ರದ ಮುತ್ತಣ್ಣ, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಸಿಬ್ಬಂದಿ ರಶ್ಮಿ, ಮಮತಾ, ಡಾ. ರಾಧಾ, ಸುರೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net