ರಾಷ್ಟ್ರ ಮಟ್ಟಕ್ಕೆ ಮೈಸೂರು ತಂಡಗಳು

TKE SPORTS)
ತರೀಕೆರೆಯಲ್ಲಿ ರಾಜ್ಯಮಟ್ಟದ ವಾಲಿಬಾಲ್ ವಿಜೇತ ಬಾಲಕರ ತಂಡಗಳಿಗೆ ಶಾಸಕ ಜಿ.ಎಚ್.ಶ್ರೀನಿವಾಸ್ ಬಹುಮಾನ ವಿತರಿಸಿದರು. ಡಿಡಿಪಿಐ ತಿಮ್ಮರಾಜು, ಎಸಿ ಎನ್.ವಿ.ನಟೇಶ್, ಎ.ಎಚ್.ಪರಶುರಾಮಪ್ಪ, ವೇದಮೂರ್ತಿ ಮತ್ತಿತರರಿದ್ದರು.
Published on

ತರೀಕೆರೆ: ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಬಾಲಕರ ಮತ್ತು ಬಾಲಕಿಯರ ಹೊನಲು ಬೆಳಕಿನ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯ 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಮೈಸೂರು ಪ್ರಥಮ, ಬೆಳಗಾವಿ ತಂಡ ದ್ವಿತೀಯ ಸ್ಥಾನ, 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಮೈಸೂರು ತಂಡ ಪ್ರಥಮ, ಬೆಂಗಳೂರು ತಂಡ ದ್ವಿತೀಯ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದವು.

14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಮೈಸೂರು ತಂಡ ಪ್ರಥಮ, ಕಲಬುರಗಿ ತಂಡ ದ್ವಿತೀಯ ಸ್ಥಾನ ಗಳಿಸಿದವು. 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಬೆಂಗಳೂರು ಪ್ರಥಮ, ಮೈಸೂರು ದ್ವಿತೀಯ ಸ್ಥಾನ ಗಳಿಸಿ ನ.10ರಿಂದ 15ರವರೆಗೆ ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದವು.

ವಿಜೇತ ತಂಡಕ್ಕೆ ಶಾಸಕ ಜಿ.ಎಚ್.ಶ್ರೀನಿವಾಸ್ ಬಹುಮಾನ ವಿತರಿಸಿದರು. ಡಿಡಿಪಿಐ ತಿಮ್ಮರಾಜು, ಎಸಿ ಎನ್.ವಿ.ನಟೇಶ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಯು.ವಿ.ಪಾಲಾಕ್ಷಮೂರ್ತಿ, ಬಿಇಒ ಎ.ಎಚ್.ಪರಶುರಾಮಪ್ಪ, ತರೀಕೆರೆ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಆರ್.ಅನಂತಪ್ಪ, ಪ್ರಧಾನ ಕಾರ್ಯದರ್ಶಿ ಡಾ. ಟಿ.ಎಂ.ದೇವರಾಜ್, ಅಜ್ಜಂಪುರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ, ತಾಲೂಕು ದೈಹಿಕ ಪರಿವೀಕ್ಷಕ ವೇದಮೂರ್ತಿ, ತಾಲೂಕು ಆರೋಗ್ಯಾಧಿಕಾರಿ ಡಾ. ಬಿ.ಜಿ.ಚಂದ್ರಶೇಖರ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net