ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್‌ಗೆ ಬಲ

20 KRN-5 (1)
ಕೆ.ಆರ್.ನಗರ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ನೇತೃತ್ವದಲ್ಲಿ ಸಂಭ್ರಮಾಚರಣೆ ಮಾಡಿದರು.
Published on


ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಬಣ್ಣನೆ


ಕೆ.ಆರ್.ನಗರ: ಕಾಂಗ್ರೆಸ್ ಏಳಿಗೆಗೆ 50 ವರ್ಷ ನಿಷ್ಠಾವಂತರಾಗಿ ದುಡಿದಿರುವ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರುವುದು ಹೆಮ್ಮೆಯ ವಿಚಾರ ಎಂದು ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಹೇಳಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಸಂಭ್ರಮಾಚರಣೆಯಲ್ಲಿ ಮಾತನಾಡಿದ ಅವರು, ದಿ.ಎಸ್.ನಿಂಜ ಲಿಂಗಪ್ಪ ಅವರ ಬಳಿಕೆ ಕನ್ನಡಿಗ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರುವುದು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್‌ಗೆ ಬಲ ಬಂದಂತಾಗಿದೆ ಎಂದರು.

ಪಕ್ಷ ನಿಷ್ಠೆ, ತ್ಯಾಗ, ಹೋರಾಟದ ಛಲ ಇದ್ದರೆ ಒಳ್ಳೆಯ ಅವಕಾಶ ರಾಜಕೀಯವಾಗಿ ದೊರೆಯಲಿದೆ ಎನ್ನುವುದಕ್ಕೆ ಖರ್ಗೆ ಸಾಕ್ಷಿಯಾಗಿದ್ದಾರೆ. ಇದನ್ನು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅರ್ಥ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇದೇ ವೇಳೆ ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದ ಕಾರ್ಯಕರ್ತರು ಮತ್ತು ಮುಖಂಡರು ಆ ನಂತರ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಂ ಪುತ್ಥಳಿಗೆ ಮಾರ್ಲಾಪಣೆ ಮಾಡಿದರು.

ಪುರಸಭಾ ಸದಸ್ಯ ಜಾವಿದ್‌ಪಾಷ, ಸ್ಥಾಯಿ ಸಮಿತಿ ಅಧ್ಯಕ್ಷ ಶಂಕರ್‌ಸ್ವಾಮಿ, ಸದಸ್ಯ ಶಿವಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ವಕ್ತಾರ ಸೈಯದ್‌ಜಾಬೀರ್, ಯುವ ಕಾಂಗ್ರೆಸ್ ನಗರಾಧ್ಯಕ್ಷ ಮಂಜುನಾಥ್, ಮುಖಂಡರಾದ ಗೀತಾಮಹೇಶ್, ಮಹದೇವನಾಯಕ, ಮಧುವನಹಳ್ಳಿಲೋಕೇಶ್, ಕಲ್ಲಹಳ್ಳಿ ಶ್ರೀನಿವಾಸ್, ನಾಗೇಂದ್ರ, ರಾಜಯ್ಯ, ಶಾಂತರಾಜು, ಹೆಬ್ಬಾಳುಶಿವು, ಚಲುವರಾಜು, ಭೈರನಾಯಕ, ಸುಧಾಕರ್, ಸುಮಂತ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net