ರಾಷ್ಟ್ರಕವಿ ಕುವೆಂಪು ಜನ್ಮದಿನ ಆಚರಣೆ

Published on

ಹನೂರು: ಪಟ್ಟಣದಲ್ಲಿ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಭಾನುವಾರ ರಾಷ್ಟ್ರಕವಿ ಕುವೆಂಪು ಅವರ ಜಯಂತಿಯನ್ನು ಆಚರಿಸಲಾಯಿತು.

ಪಟ್ಟಣದ ಆಟೋ ನಿಲ್ದಾಣದ ಬಳಿ ಕುವೆಂಪು ಅವರ ಭಾವಚಿತ್ರಕ್ಕೆ ಮುಖಂಡರು ಹಾಗೂ ಯುವಕರು ಪುಷ್ಪನಮನ ಸಲ್ಲಿಸಿ ಸಿಹಿ ಹಂಚಿದರು. ಈ ವೇಳೆ ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮಾದೇಶ್ ಮಾತನಾಡಿ, ಕುವೆಂಪು ಅವರು ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ನಾಡಗೀತೆಯನ್ನು ಸಮರ್ಪಿಸಿದ್ದಾರೆ. ಮಾನವೀಯ ಮೌಲ್ಯವನ್ನು ಹೊಂದಿದ್ದ ಇವರು ಜನಮಾನಸದಲ್ಲಿ ಇಂದಿಗೂ ಅಜರಾಮರರು. ಈ ದೆಸೆಯಲ್ಲಿ ಪ್ರತಿ ವರ್ಷ ಸಂಘದ ವತಿಯಿಂದ ಜಯಂತಿ ಆಚರಿಸುತ್ತಿರುವುದು ಉತ್ತಮ ಸಂಗತಿ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಟರಾಜು, ಒಕ್ಕಲಿಗರ ಸಂಘದ ನಿರ್ದೇಶಕ ಮಂಜೇಶ್, ಮುಖಂಡ ಸಿದ್ದೇಗೌಡ, ಶಿಕ್ಷಕ ಸಂತೋಷ್, ಯುವ ಮುಖಂಡರಾದ ಮಂಜುನಾಥ್, ಅಭಿಲಾಷ್, ವಿಜಯ್, ವೆಂಕಟೇಶ್, ರವಿ, ಭರತ್, ನಾಗೇಂದ್ರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net