ರಾಷ್ಟ್ರದ ಉನ್ನತಿ, ಅವನತಿಗೆ ಪ್ರಜೆಗಳ ಆರೋಗ್ಯ ಮಾನದಂಡ

28..npk..1
ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರದ ಉದ್ಘಾಟನೆಯನ್ನು ಅತಿಥಿಗಳು ನೆರವೇರಿಸಿದರು. ಡಾ.ನಂಜುಂಡಯ್ಯ, ಮುಕ್ಕಾಟಿರ ವಿನಯ್, ಕುಂಡಿಯೋಳಂಡ ಗಣೇಶ್ ಮತ್ತಿತರರಿದ್ದರು.
Published on

ನಾಪೋಕ್ಲು: ರಾಷ್ಟ್ರದ ಉನ್ನತಿ ಮತ್ತು ಅವನತಿಗೆ ಪ್ರಜೆಗಳ ಆರೋಗ್ಯ ಮಾನದಂಡವಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಂಜುಂಡಯ್ಯ ಅಭಿಪ್ರಾಯಪಟ್ಟರು.

ಅವರು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ ಯೋಜನೆ ಹಾಗೂ ನಾಪೋಕ್ಲು ಲಯನ್ಸ್ ಕ್ಲಬ್ ಮತ್ತು ನಾಪೋಕ್ಲು ಗ್ರಾಮ ಪಂಚಾಯಿತಿ, ಮಡಿಕೇರಿ ತಾಲೂಕು ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಸಾರ್ವಜನಿಕರಿಗೆ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ರಾಷ್ಟ್ರ ನಿರ್ಮಾಣದಲ್ಲಿ ತಾಯಿ, ಮಗುವಿನ ಆರೋಗ್ಯ ಹಾಗೂ ಜೀವಿತಾವಧಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಂದು ಗ್ರಾಮೀಣ ಜನತೆಗೆ ಆರೋಗ್ಯ ಸೇವೆಯನ್ನು ಅವರ ವ್ಯಾಪ್ತಿಯಲ್ಲಿಯೇ ನೀಡುವ ಕಾರ್ಯಕ್ರಮ ಈ ಆರೋಗ್ಯ ಉಚಿತ ತಪಾಸಣಾ ಶಿಬಿರದ್ದಾಗಿದೆ ಎಂದರು.

ಬಳಿಕ ನಡೆದ ಆರೋಗ್ಯ ತಪಾಸಣೆಯಲ್ಲಿ 459 ರೋಗಿಗಳು ಆರೋಗ್ಯ ತಪಾಸಣೆಗೆ ಒಳಗಾದರು. ಈ ಸಂದರ್ಭ ಸಮಸ್ಯೆಗಳಿದ್ದ ರೋಗಿಗಳಿಗೆ ಆರೋಗ್ಯ ತಜ್ಞರು ಸೂಕ್ತ ಸಲಹೆ, ಸೂಚನೆಗಳನ್ನು ನೀಡಿ ಮಾರ್ಗದರ್ಶನ ನೀಡಿದರು.

ಲಯನ್ಸ್ ವಲಯಾಧ್ಯಕ್ಷ ಮುಕ್ಕಾಟಿರ ವಿನಯ್, ಸ್ಥಳೀಯ ಲಯನ್ಸ್ ಅಧ್ಯಕ್ಷ ಕುಂಡಿಯೋಳಂಡ ಗಣೇಶ್, ಗ್ರಾಪಂ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ, ಆರೋಗ್ಯ ಇಲಾಖೆ ವೃತ್ತ ಅಧಿಕಾರಿ ಬಿದ್ದಾಟಂಡ ಮೇರಿ ಚೆಟ್ಟಿಯಪ್ಪ, ಸಮುದಾಯ ಆರೋಗ್ಯ ಕೇಂದ್ರದ ವ್ಯವಸ್ಥಾಪಕ ಮಧುಸೂದನ್, ಆರೋಗ್ಯ ಇಲಾಖೆ ಸಿಬ್ಬಂದಿ, ಚುನಾಯಿತ ಪ್ರತಿನಿಧಿಗಳು, ಸಂಘ-ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net