

ಮೈಸೂರು: ರಾಷ್ಟ್ರದ ಪ್ರಗತಿ, ಏಕತೆ, ಸಹಬಾಳ್ವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ ಎಂದು ಮಾಜಿ ಶಾಸಕ ಎಲ್.ನಾಗೇಂದ್ರ ಬಣ್ಣಿಸಿದರು.
ನಗರದ ನ್ಯೂ ಸಯ್ಯಜಿರಾವ್ ರಸ್ತೆಯಲ್ಲಿರುವ ಜೀವಧಾರ ರಕ್ತನಿಧಿ ಕೇಂದ್ರದ ಆವರಣದಲ್ಲಿ ಚಾಮರಾಜ ಬಿಜೆಪಿ ಯುವ ಮೋರ್ಚಾದಿಂದ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರ 73ನೇ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ಚಾಮರಾಜ ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ ಪುನೀತ್, ರಮೇಶ್, ಜೀವಧಾರ ರಕ್ತ ಬ್ಯಾಂಕ್ ಕೇಂದ್ರದ ನಿರ್ದೇಶಕ ಎಸ್.ಇ.ಗಿರೀಶ್, ಚಾಮರಾಜ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಆರ್.ಸಚಿನ್, ಕ್ಷೇತ್ರದ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅರ್ಜುನ್, ಉಪಾಧ್ಯಕ್ಷರಾದ ಯೋಗೇಶ್, ಪಂಕಜ್ ಪಾರಿಕ್, ಮೈಸೂರು ನಗರ ಭಾರತೀಯ ಜನತಾ ಪಾರ್ಟಿಯ ಪ್ರಧಾನ ಕಾರ್ಯದರ್ಶಿಗಳಾದ ಗಿರಿಧರ್, ವಾಣೀಶ್ ಕುಮಾರ್, ಸೋಮಸುಂದರ್, ನಗರ ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಜೋಗಿ ಮಂಜು ಇತರರಿದ್ದರು.