ರಾಷ್ಟ್ರದ ಪ್ರಗತಿಗೆ ಶಿಕ್ಷಣವೇ ಮುಖ್ಯ

8-4
ಶಿಕ್ಷಕರ ದಿನಾಚರಣೆ ಕಾರ್ಯಕ್ರಮಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಉತ್ತಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಿ ಸನ್ಮಾನಿಸಲಾಯಿತು. ನೀಲಕಂಠ ಸ್ವಾಮೀಜಿ, ಶಾಸಕ ಮಹಾಂತೇಶ ದೊಡಗೌಡರ, ಮಹಾಂತೇಶ ಕೌಜಲಗಿ ಇತರರು ಇದ್ದರು.
Published on

ಬೈಲಹೊಂಗಲ, ಬೆಳಗಾವಿ : ಒಂದು ದೇಶ ಅಭಿವದ್ಧಿ ಹೊಂದಲು ಶಿಕ್ಷಣವೇ ಮುಖ್ಯ ಕಾರಣವಾಗಿರುತ್ತದೆ. ರಾಷ್ಟ್ರಪತಿಗಿಂತ ಶಿಕ್ಷಕರ ಹುದ್ದೆಯೇ ನನಗೆ ಹೆಚ್ಚು ಉನ್ನತವಾದದ್ದು ಎಂದು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಹೇಳುತ್ತಿದ್ದರು ಎಂದು ಶಾಸಕ ಮಾಹಾಂತೇಶ ದೊಡಗೌಡರ ಹೇಳಿದರು.

ಪಟ್ಟಣದ ಶಿವಬಸವ ಕಲ್ಯಾಣ ಮಂಟಪದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಈಚೆಗೆ ಏರ್ಪಡಿಸಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಶಿಕ್ಷಕರ ವತ್ತಿ ಅತ್ಯಂತ ಪವಿತ್ರವಾದದ್ದು, ಕರ್ತವ್ಯವನ್ನು ಪ್ರಾಮಾಣಿಕತೆ, ನಿಷ್ಠುರತೆ ಮತ್ತು ದಕ್ಷತೆಂದ ನಿರ್ವಹಿಸಿದಾಗ ಜೀವನ ಸಾರ್ಥಕವಾಗುತ್ತದೆ. ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವೆ ಎಂದರು.

ಶಾಸಕ ಮಹಾಂತೇಶ ಕೌಜಲಗಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರ ಶಿಕ್ಷಣಕ್ಕೆ ಸಾಕಷ್ಟು ಪ್ರೋತ್ಸಾಹ ನೀಡುತ್ತಿದೆ. ಸಮಾಜ ರೂಪುಗೊಳ್ಳುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ವಿದ್ಯೆ ಕಲಿಸಿದ ಗುರುವನ್ನು ಮರೆಯಬಾರದು ಎಂದರು.
ಬಿಇಒ ಎ.ಎನ್.ಪ್ಯಾಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಕರು ಮಕ್ಕಳಿಗೆ ಸಮಗ್ರ ಶಿಕ್ಷಣ ನೀಡಿ ಉತ್ತಮ ನಾಗರಿಕರಾಗಿ ಬೆಳೆಸಬೇಕು ಎಂದರು.

ಮೂರುಸಾವಿರ ಶಾಖಾ ಮಠದ ಪ್ರಭುನೀಲಕಂಠ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮದ್ಯಪಾನ ನಿಗಮದ ಅಧ್ಯಕ್ಷ ಮಲ್ಲಿಕಾರ್ಜುನ ತುಬಾಕಿ ಮಾತನಾಡಿದರು. ಪುರಸಭೆ ಅಧ್ಯಕ್ಷ ಬಸವರಾಜ ಜನ್ಮಟ್ಟಿ, ತಾಪಂ ಇಒ ಸುಭಾಸ ಸಂಪಗಾಂವಿ, ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಶಿವಾನಂದ ಕುಡಸೋಮಣ್ಣವರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂದ ಅಧ್ಯಕ್ಷ ಬಿ.ಎಸ್.ಫಕೀರಸ್ವಾಮಿಮಠ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಸಿ.ಹಂಗರಕಿ, ಜಿಲ್ಲಾ ಶಿಕ್ಷಕರ ಮುಖಂಡ ಎಸ್.ಡಿ.ಗಂಗಣ್ಣವರ, ಅಕ್ಷರ ದಾಸೋಹ ಸಹಾಯ ನಿರ್ದೇಶಕ ಪ್ರಕಾಶ ಮೆಳವಂಕಿ, ಕ್ಷೇತ್ರ ಸಮನ್ವಯಾಧಿಕಾರಿ ಬಿ. ಎನ.ಕಸಾಳೆ, ಮಹಾಬಳೇಶ್ವರ ಬೋಳಣ್ಣವರ, ಹೇಮಾ ಕುಲಕರ್ಣಿ ಎಸ್.ಎಂ. ಕರೀಕಟ್ಟಿ, ಎಂ.ಡಿ.ನಂದೆಣ್ಣವರ, ಮಹಾಂತೇಶ ಹಾದಿಮನಿ, ಜಿ.ಬಿ.ಪಟ್ಟಣಶೆಟ್ಟಿ , ಅಜ್ಜಪ್ಪ ಅಂಗಡಿ ಇದ್ದರು.
ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕು ಮತ್ತು ಜಿಲ್ಲೆಗೆ ಉತ್ತಮ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಸ್ಥಳೀಯ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ ವಿತರಣೆ, ಪ್ರತಿಭಾ ಕಾರಂಜಿ ಉದ್ಘಾಟಿಸಲಾತು. ನಿವತ್ತಿ ಹೊಂದಿದ 132 ಶಿಕ್ಷಕರನ್ನು ಸನ್ಮಾನಿಸಲಾಯಿತು. ಸ್ಕೌಟ್ಸ್ ಗೈಡ್ಸ್‌ನಲ್ಲಿ ಸಾಧನೆ ಮಾಡಿದ ಯುವರಾಣಿ ಎಸ್.ಸೋಮಪ್ಪ ಗಡಾದ ಅವರನ್ನು ಸತ್ಕರಿಸಿ ಉತ್ತಮ ಸೇವಾ ರತ್ನ ಪ್ರಶಸ್ತಿ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net