ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಲೋಕಾರ್ಪಣೆ ಧಾರವಾಡ ಐಐಐಟಿ ಕ್ಯಾಂಪಸ್ ಉದ್ಘಾಟನೆ ನಾಡಿದ್ದು

1111111111111
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಧಾರವಾಡದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಉದ್ಘಾಟನೆ ಮತ್ತು ಲೋಕಾರ್ಪಣೆಯನ್ನು ಸೆ. 26ರಂದು ಮಧ್ಯಾಹ್ನ 3 ಗಂಟೆಗೆ ಸತ್ತೂರು ಬಳಿಯ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸ್ಥೆಯನ್ನು ಉದ್ಘಾಟಿಸಿಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರತಿನಿಧಿಗಳು, ಕೈಗಾರಿಕಾ ಪಾಲುದಾರರಾದ ಕಿಯೋನಿಕ್ಸ್, ಇನ್ಫೋಸಿಸ್ ಪ್ರತಿನಿಧಿಗಳು, ಕಾಲೇಜಿನ ಬೋರ್ಡ್ ಆ್ ಗವರ್ನರ್ಸ್, ಸೆನೆಟ್, ಹಣಕಾಸು ಸಮಿತಿ, ಕಟ್ಟಡ ಮತ್ತು ಕಾಮಗಾರಿ ಸಮಿತಿ, ಪ್ರತಿಷ್ಠಿತ ಸಂಸ್ಥೆಗಳ ಶಿಕ್ಷಣ ತಜ್ಞರು ಮತ್ತು ಉದ್ಯಮಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಐಐಟಿಯು ಸಾರ್ವಜನಿಕ ಖಾಸಗಿ- ಕೈಗಾರಿಕಾ ಪಾಲುದಾರಿಕೆಯ ಮಾದರಿಯಲ್ಲಿ ಕೇಂದ್ರ- ರಾಜ್ಯ ಸರ್ಕಾರ ಹಾಗೂ ಕೈಗಾರಿಕಾ ಸಂಸ್ಥೆಯಾದ ಕಿಯೋನಿಕ್ಸ್ ಸಹಭಾಗಿತ್ವದೊಂದಿಗೆ 2015ಲ್ಲಿ ಅಸ್ತಿತ್ವಕ್ಕೆ ಬಂದಿದೆ. ದೇಶದಲ್ಲಿ ಮಾಹಿತಿ ತಂತ್ರಜ್ಞಾನ ಉನ್ನತ ಶಿಕ್ಷಣ, ವತ್ತಿಪರ ಪರಿಣತಿ ಮತ್ತು ಕೌಶಲ ಹೆಚ್ಚಿಸುವ ಉದ್ದೇಶದಿಂದ ಸಂಸ್ಥೆಯನ್ನು ಸ್ಥಾಪಿಸಲಾಗಿದೆ.
ಹಿಂದಿನ ಶೈಕ್ಷಣಿಕ ವರ್ಷದಲ್ಲಿ 834 ವಿದ್ಯಾರ್ಥಿಗಳಿದ್ದರು. ಪ್ರಸಕ್ತ ವರ್ಷದ ಪ್ರವೇಶಾತಿ ಕೊನೆಯಲ್ಲಿ 1,000 ವಿದ್ಯಾರ್ಥಿಗಳನ್ನು ಹೊಂದುವ ನಿರೀಕ್ಷೆ ಇದೆ. ಪ್ರಸ್ತುತ ಭಾರತ ಮತ್ತು ಹೊರದೇಶದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಿಂದ ಪಿಎಚ್.ಡಿ, ಪೊಸ್ಟ್ ಡಾಕ್ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಪರಿಣತಿ ಹೊಂದಿದ 36 ಅಧ್ಯಾಪಕರನ್ನು ಹೊಂದಿದೆ. ಸಂಸ್ಥೆಯಲ್ಲಿ 29 ಭೋಧಕೇತರ ಸಿಬ್ಬಂದಿ ಇದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net