ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಹು-ಧಾ ಪಾಲಿಕೆಯಿಂದ ಪೌರ ಸನ್ಮಾನ

Murmu
Published on

ಹುಬ್ಬಳ್ಳಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಸೋಮವಾರದಂದು ಪೌರ ಸನ್ಮಾನ ಮಾಡಲಾಯಿತು. ರಾಷ್ಟ್ರಪತಿ ಆದ ನಂತರ ಇದೆ ಮೊದಲ ಬಾರಿಗೆ ರಾಜ್ಯ ಪ್ರವಾಸ ಕೈಗೊಂಡಿರುವ ದ್ರೌಪದಿ ಮುರ್ಮು ಅವರಿಗೆ ಮೊದಲ ಪೌರ ಸನ್ಮಾನ ನೀಡಿದ ಹೆಗ್ಗಳಿಕೆ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯದ್ದು. ಹುಬ್ಬಳ್ಳಿ ದೇಶಪಾಂಡೆ ನಗರದ ಕರ್ನಾಟಕ ಜಿಮಖಾನಾ ಮೈದಾನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮೇಯರ್ ಈರೇಶ ಅಂಚಟಗೇರಿ ಅವರು ಪೌರ ಸನ್ಮಾನ ನೀಡಿ, ಶ್ರೀ ಸಿದ್ಧಾರೂಢ ಸ್ವಾಮೀಜಿ ಅವರ ಬೆಳ್ಳಿ ಮೂರ್ತಿಯನ್ನು ಸ್ಮರಣಿಕೆಯನ್ನಾಗಿ ನೀಡಿದರು. ಸಚಿವರಾದ ಬಿ.ಎ. ಬಸವರಾಜ, ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಸಿಎಂ ಜಗದೀಶ ಶೆಟ್ಟರ್, ಶಾಸಕರಾದ ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ, ಅಮೃತ ದೇಸಾಯಿ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net