ರಾಷ್ಟ್ರಪತಿಗೆ ಪಾಲಿಕೆಯಿಂದ ಪೌರ ಸನ್ಮಾನ 26ರಂದು

president of india
Published on

ಹುಬ್ಬಳ್ಳಿ: ಇಲ್ಲಿಯ ದೇಶಪಾಂಡೆನಗರದ ಕರ್ನಾಟಕ ಜಿಮ್ಾನಾ ಮೈದಾನದಲ್ಲಿ ಸೆ. 26ರಂದು ಬೆಳಗ್ಗೆ 11ರಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ರಾಷ್ಟ್ರಪತಿ ದ್ರೌಪದಿ ಮುಮು ಅವರಿಗೆ ಪೌರ ಸನ್ಮಾನ ಏರ್ಪಡಿಸಲಾಗಿದೆ.

ಕೇಂದ್ರ ಗಣಿ, ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹಾಗೂ ಪಾಲಿಕೆ ಮೇಯರ್ ಈರೇಶ ಅಂಚಟಗೇರಿ ಅವರ ಕೋರಿಕೆ ಮೇರೆಗೆ ರಾಷ್ಟ್ರಪತಿಯವರು ಪೌರ ಸನ್ಮಾನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ಕುರಿತು ಸೆ. 10ರಂದು ಮೇಯರ್ ಪತ್ರ ಬರೆದಿದ್ದರು.

ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರಚಂದ್ ಗೆಹ್ಲೋತ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಇತರರು ಉಪಸ್ಥಿತರಿರುವರು ಎಂದು ಮೇಯರ್ ಈರೇಶ ಅಂಚಟಗೇರಿ ತಿಳಿಸಿದ್ದಾರೆ.

ಸೆ. 26ರಂದು ಮಧ್ಯಾಹ್ನ 1 ಗಂಟೆಗೆ ರಾಷ್ಟ್ರಪತಿ ಅವರು ಧಾರವಾಡ ಐಐಟಿ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ಪಾಲ್ಗೊಳ್ಳುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net