ರಾಷ್ಟ್ರಮಟ್ಟಕ್ಕೆ ಆಯ್ಕೆ

28 vikram 2
Published on

ಧಾರವಾಡ: ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದ ಪಿಯು ಪ್ರಥಮ ವರ್ಷದ ವಿದ್ಯಾರ್ಥಿ ಶಿಶಿರ್ ಜೋಯಿಸ್ ರಾಷ್ಟ್ರ ಮಟ್ಟದ ಇನ್ಸ್ಪಾಯರ್ ಅವಾರ್ಡ್‌ಗೆ ಆಯ್ಕೆಯಾಗಿದ್ದಾನೆ.
ಮಂಗಳೂರಿನ ಸೂರತ್ಕಲ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದಲ್ಲಿ ಜು. 25, 26ರಂದು ಏರ್ಪಡಿಸಿದ್ದ ಪೂರ್ವ ತಯಾರಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಹೆಚ್ಚಿನ ತರಬೇತಿ ಪಡೆದಿದ್ದಾನೆ. ಶಾಲೆಯ ಕಂಪ್ಯೂಟರ್ ಶಿಕ್ಷಕ ರಾಘವೇಂದ್ರ ಪಾಟೀಲ ಮಾರ್ಗದರ್ಶನ ನೀಡಿದ್ದಾರೆ. ವಿದ್ಯಾರ್ಥಿ ಸಾಧನೆಗೆ ಶಾಲೆ ಕಾರ್ಯದರ್ಶಿ ರಾಘವೇಂದ್ರ ಅಂಬೇಕರ, ಪ್ರಾಚಾರ್ಯ ಡಾ. ಅನಿತಾ ರೈ, ಆಡಳಿತಾಧಿಕಾರಿ ಕುಮಾರಸ್ವಾಮಿ ಕುಲಕರ್ಣಿ ಹಾಗೂ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net