

ಚಿತ್ರದುರ್ಗ: ಜೆಇಇ 2024ರ ಫಲಿತಾಂಶ ಪ್ರಕಟವಾಗಿದ್ದು, ರಾಷ್ಟ್ರಮಟ್ಟದಲ್ಲಿ ಎಸ್‌ಆರ್‌ಎಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ.
ವಿದ್ಯಾರ್ಥಿಗಳಾದ ಪಿ.ಟಿ.ಸೃಜನ್ 30ನೇ ರ್ಯಾಂಕ್, ಎನ್.ಮದನ್ 1,162ನೇ ರ್ಯಾಂಕ್, ಮಧು 2,051 ರ್ಯಾಂಕ್ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಪರೀಕ್ಷೆಗೆ ನೋಂದಾಯಿಸಿದ್ದ 30 ವಿದ್ಯಾರ್ಥಿಗಳಲ್ಲಿ 18 ಮಂದಿ ಪ್ರತಿಷ್ಠಿತ ಐಐಟಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಅರ್ಹರಾಗಿದ್ದಾರೆ. ಈ ಹಿಂದಿನ ರಾಷ್ಟ್ರಮಟ್ಟದ ಪರೀಕ್ಷೆಗಳ ಎಲ್ಲ ದಾಖಲೆ ಮೀರಿಸಿದ್ದಾರೆ.
ವಿದ್ಯಾರ್ಥಿಗಳ ಅಭೂತ ಪೂರ್ವ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಕಾರ್ಯದರ್ಶಿ ಸುಜಾತಾ ಲಿಂಗಾರೆಡ್ಡಿ, ಉಪಾಧ್ಯಕ್ಷ ಅಮೋಘ್, ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿದೆ.