ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಕಾರ್ಯಕ್ರಮ

bkt-10-1
ಬಾಗಲಕೋಟೆ ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಂತರ ಇಲಾಖಾ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಬಿತ್ತಿಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.
Published on

ಬಾಗಲಕೋಟೆ: ಜಿಲ್ಲೆಯಾದ್ಯಂತ ಮಾ.೧೩ ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅಪರ ಜಿಲ್ಲಾಽಕಾರಿ ರಮೇಶ ಕಳಸದ ತಿಳಿಸಿದರು.

ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಂತರ ಇಲಾಖಾ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಂತುಹುಳು ಸೋಂಕಿನಿಂದಾಗಿ ಮಕ್ಕಳಲ್ಲಿ ರಕ್ತಹೀನತೆ, ಪೌಷ್ಠಿಕಾಂಶ ಕೊರತೆ, ನಿಶಕ್ತಿ, ಹಸಿವು ಆಗದಿರುವುದು, ಹೊಟ್ಟೆ ನೋವು ಕಂಡುಬರುತ್ತದೆ. ಇದನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಮಾ. ೧೩ ರಂದು ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಜಂತುಹುಳು ನಾಶಕ ಅಲ್ಬೆಂಡಝೋಲ್ ಮಾತ್ರೆಗಳನ್ನು ನೀಡಲಾಗುತ್ತಿದೆ. ೧ ರಿಂದ ೫ ವರ್ಷದ ಮಕ್ಕಳಿಗೆ ಅಂಗನವಾಡಿ ಕೇಂದ್ರಗಳಲ್ಲಿ, ೬ ರಿಂದ ೧೯ ವರ್ಷದ ಮಕ್ಕಳಿಗೆ ಶಾಲೆಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ ಎಂದರು.

ದಾಖಲಾಗದ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಜಂತು ನಿವಾರಕ ಅಲ್ಬೆಂಡಝೋಲ್ ಮಾತ್ರೆಯನ್ನು ನೀಡಲು ಮಾ. ೧೪ ರಿಂದ ೨೫ ವರೆಗೆ ಮಾಪ್ ಅಪ್ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ೧ ರಿಂದ ೫ ವರ್ಷದೊಳಗಿನ ೨೧೨೦೧೬ ಮಕ್ಕಳು, ೬ ರಿಂದ ೧೯ ವರ್ಷದೊಳಗಿನ ೫೮೨೮೪೧ ಮಕ್ಕಳು ಸೇರಿ ೧ ರಿಂದ ೧೯ ವರ್ಷದೊಳಗಿನ ಒಟ್ಟು ೭೯೪೮೫೭ ಜನ ಮಕ್ಕಳು ಇದ್ದಾರೆ. ಈ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಮಾತ್ರೆಗಳನ್ನು ನೀಡಲು ಕ್ರಮವಹಿಸುವಂತೆ ಅಽಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಆರ್.ಸಿ.ಎಚ್ ಅಽಕಾರಿ ಡಾ.ಬಿ.ಜಿ.ಹುಬ್ಬಳ್ಳಿ ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಽಕಾರಿ ಡಾ.ಜಯಶ್ರೀ ಎಮ್ಮಿ, ಜಿಲ್ಲಾ ಕುಟುಂಬ ಕಲ್ಯಾಣಾಽಕಾರಿ ಡಾ.ಅರವಿಂದ ಪಟ್ಟಣಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ ಕೆ.ಎಚ್, ಡಿವೈಪಿಸಿಯ ಉಪ ಸಮನ್ವಯಾಽಕಾರಿ ಜಾಸ್ಮೀನ್ ಕಿಲ್ಲೇದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net