ರಾಷ್ಟ್ರೀಯ ಪೋಷಣ್ ಅಭಿಯಾನ ಮಾಸಾಚರಣೆ

15 KGL 9
ಕೊಳ್ಳೇಗಾಲದ ಸರ್ಕಾರಿ ಬುಡಕಟ್ಟು ಬಾಲಕಿಯರ ವಸತಿ ನಿಲಯದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮವನ್ನು ವೈದ್ಯಾಧಿಕಾರಿ ಡಾ.ಲಾವಣ್ಯ ಉದ್ಘಾಟಿಸಿದರು. ಟಿ.ಜೆ.ಸುರೇಶ್, ದಾಕ್ಷಾಯಣಿ ಮತ್ತು ಇತರರು ಇದ್ದರು.
Published on

ಕೊಳ್ಳೇಗಾಲ: ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರನ್ನು ಆರೋಗ್ಯವಂತರನ್ನಾಗಿ ರೂಪಿಸುವ ಸಲುವಾಗಿ ಪೋಷಣ್ ಅಭಿಯಾನವನ್ನು ಜಾರಿಗೆ ತರಲಾಗಿದೆ ಎಂದು ಸಾಮಾಜಿಕ ವರ್ತನೆ, ಬದಲಾವಣೆ ಸಂವಹನ ಯೋಜನೆಯ (ಎಸ್‌ಬಿಸಿಸಿ) ಜಿಲ್ಲಾ ಸಂಯೋಜಕ ಟಿ.ಜೆ.ಸುರೇಶ್ ಹೇಳಿದರು.

ಪಟ್ಟಣದ ಸರ್ಕಾರಿ ಬುಡಕಟ್ಟು ಬಾಲಕಿಯರ ವಸತಿ ನಿಲಯದಲ್ಲಿ ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುನಿಸ್ೆ ಮತ್ತು ಆರೋಗ್ಯ ನಿರ್ವಹಣಾ ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ್ ಅಭಿಯಾನ ಮಾಸಾಚರಣೆ, ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗರ್ಭಿಣಿಯರು, ಬಾಣಂತಿಯರಲ್ಲಿ ಪೌಷ್ಟಿಕಾಂಶ ಮಟ್ಟ ವೃದ್ಧಿಗಾಗಿ ಮಾತೃಪೂರ್ಣ, ಸೃಷ್ಟಿ ಹಾಗೂ ಕ್ಷೀರಭಾಗ್ಯ ಯೋಜನೆಯನ್ನೂ ಜಾಳಿಗೊಳಿಸಿದೆ. ಖನಿಜಾಂಶ ಹೊಂದಿರುವ ಸೊಪ್ಪು, ತರಕಾರಿ ಜತೆ ಮೊಳಕೆ ಕಾಳುಗಳನ್ನು ಉಪಯೋಗಿಸುವ ಮೂಲಕ ಉತ್ತಮ ಆರೋಗ್ಯ ಹೊಂದಬೇಕು. ತಾಯಿ ಆರೋಗ್ಯವಾಗಿದ್ದಾಗ ಮಾತ್ರ ಆರೋಗ್ಯವಂತ ಶಿಶುವಿಗೆ ಜನ್ಮ ನೀಡಲು ಸಾಧ್ಯವಾಗುತ್ತದೆ. ಹಂತ ಹಂತವಾಗಿ ಅಪೌಷ್ಟಿಕತೆ ಮುಕ್ತ ಜಿಲ್ಲೆಯನ್ನು ರೂಪಿಸಲು ಉದ್ದೇಶಿಸಲಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ವೈದ್ಯಾಧಿಕಾರಿ ಡಾ.ಲಾವಣ್ಯ ಮಾತನಾಡಿ, ಗರ್ಭಿಣಿಯರು, ಬಾಣಂತಿಯರು ಯಾವುದೇ ಕಾರಣಕ್ಕೂ ಅಪೌಷ್ಟಿಕತೆಯಿಂದ ಹಾಗೂ ರಕ್ತಹೀನತೆಯಿಂದ ಬಳಲದಂತೆ ಸದಾ ನಿಗಾವಹಿಸಬೇಕು. ಇದರಿಂದ ಎರಡೂ ಜೀವಗಳು ಅನಾರೋಗ್ಯಕ್ಕೆ ತುತ್ತಾಗುವ ಅಪಾಯಗಳು ಹೆಚ್ಚಾಗಲಿವೆ ಎಂದರು

ನಿಲಯ ಮೇಲ್ವಿಚಾರಕರಾದ ದಾಕ್ಷಾಯಣಿ, ಸಿಎಚ್‌ಓ ಭಾನುಪ್ರಿಯ ಮತ್ತು ಸಿಬ್ಬಂದಿ ಅರ್ಚನಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net