

ಹಾಸನ :ರಾಷ್ಟ್ರೀಯ ವಿಪತ್ತು ಕಾರ್ಯಪಡೆ ತಂಡದಿಂದ ಶುಕ್ರವಾರ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಎಚ್.ಪಿ.ಸಿ.ಎಲ್ ಟರ್ಮಿನಲ್‌ನಲ್ಲಿ ತುರ್ತು ಪರಿಸ್ಥಿತಿಯಲ್ಲಿ ಎದುರಾಗಬಹುದಾದ ಸಮಸ್ಯೆಗಳ ಕುರಿತು ಅಣುಕು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.
ಅಣಕು ಪ್ರದರ್ಶನದಲ್ಲಿ ಎನ್.ಡಿ.ಆರ್.ಎಫ್ ತಂಡದ ವತಿಯಿಂದ ಎದುರಾಗುವ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಹಾಗೂ ಡೀಸೆಲ್ ಟ್ಯಾಂಕರ್‌ನಲ್ಲಿ ಡೀಸೆಲ್ ಸೋರಿಕೆಯಾದ ಸಂದರ್ಭದಲ್ಲಿ ತಂಡವು ಯಾವ ರೀತಿ ಕಾರ್ಯನಿರ್ವಹಿಸುತ್ತದೆ ಎಂಬುದ ಬಗ್ಗೆ ಸುದೀರ್ಘವಾಗಿ ಅಣುಕು ಪ್ರದರ್ಶನದ ಮೂಲಕ ಮಾಹಿತಿ ನೀಡಲಾಯಿತು.
ಎಚ್. ಪಿ. ಸಿ ಎಲ್ ಟರ್ಮಿನಲ್‌ನಲ್ಲಿ ರಾಸಾಯನಿಕ ಅನಿಲಗಳು ಸೋರಿಕೆಯಾದ ಸಂದರ್ಭದಲ್ಲಿ ಕೈಗೊಳ್ಳಬಹುದಾದ ಕ್ರಮಗಳು ಬಗ್ಗೆ ವಿಶೇಷವಾಗಿ ತಿಳಿಸಲಾಯಿತು.
ಎರಡು ಪ್ರದರ್ಶನಗಳು ವಿಶೇಷವಾಗಿದ್ದು ಎಲ್ಲರ ಗಮನ ಸೆಳೆಯಿತು, ತುರ್ತು ಪರಿಸ್ಥಿತಿ ಉಂಟಾದಲ್ಲಿ ವಿವಿಧ ಇಲಾಖೆಗಳ ಪಾತ್ರಗಳ ಬಗ್ಗೆ ಮಾಹಿತಿಯಲ್ಲಿ ನೀಡಲಾಯಿತು.
ಈ ವೇಳೆಯಲ್ಲಿ ಉಪ ವಿಭಾಗಾಧಿಕಾರಿ ರಕ್ಷಿತ್, ಎನ್.ಡಿ.ಆರ್.ಎಫ್ ತಂಡದ ಮುಖ್ಯಸ್ಥ ಶಾಂತಿಲಾಲ್ ಜಾಟಿಯ, ಅಗ್ನಿಶಾಮಕ ಇಲಾಖೆಯ ಅಧಿಕಾರಿ ನವೀನ್, ಎಚ್.ಪಿ.ಸಿ.ಎಲ್ ನ ವ್ಯವಸ್ಥಾಪಕ ಪ್ರಕಾಶ್, ಹೋಂ ಗಾರ್ಡ್ ಇಲಾಖೆಯ ಕಮಾಂಡೆಂಟ್ ಧಮೇರ್ಂದ್ರ, ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಿವಸ್ವಾಮಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಲ್ಲೇಶ್, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ರಾಮಪ್ರಕಾಶ್, ಕೈಗಾರಿಕೆ ಮತ್ತು ಬಾಯ್ಲರ್ ಇಲಾಖೆಯ ಉಪ ನಿರ್ದೇಶಕ ಕೃಷ್ಣಪ್ಪ, ಪರಿಸರ ಅಧಿಕಾರಿ ರವಿಚಂದ್ರ, ಪಶುಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಸುಂದರೇಶ್, ಹಾಗೂ ಮತ್ತಿತರ ಇಲಾಖೆ ಅಧಿಕಾರಿಗಳು ಇದ್ದರು.