ರಾಷ್ಟ್ರೀಯ ಸಂಪತ್ತು ಹಾನಿ ಗೊಳಿಸಿದವರಿಗೆ ಕಠಿಣ ಶಿಕ್ಷೆ ವಿಧಿಸಿ

1SPT2
ಹರಿಯಾಣ, ದೆಹಲಿ ಮತ್ತು ಮಣಿಪುರದಲ್ಲಿ ಹಿಂಸಾಚಾರದಲ್ಲಿ ಹಿಂದೂಗಳ ಹತ್ಯೆ ಹಾಗು ರಾಷ್ಟ್ರೀಯ ಸಂಪತ್ತನ್ನು ಹಾನಿಗೊಳಿಸಿದ ಪ್ರಕರಣದಲ್ಲಿ ಗಲಭೆಕೋರರ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಸೋಮವಾರಪೇಟೆ ತಹಸೀಲ್ದಾರ್ ಎನ್.ಎಸ್.ನರಗುಂದ್ ಮೂಲಕ ಕೇಂದ್ರ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರದೀಪ್, ರವಿ, ಕುಮಾರ್, ಶಶಿಧರ್ ಇದ್ದರು.
Published on

ಸೋಮವಾರಪೇಟೆ: ಹರಿಯಾಣ, ದೆಹಲಿ ಮತ್ತು ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಹಿಂದೂಗಳ ಹತ್ಯೆ ಹಾಗು ರಾಷ್ಟ್ರೀಯ ಸಂಪತ್ತನ್ನು ಹಾನಿಗೊಳಿಸಿದ ಪ್ರಕರಣದಲ್ಲಿ ಗಲಭೆಕೋರರ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ತಹಸೀಲ್ದಾರ್ ಮೂಲಕ ಕೇಂದ್ರ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.

ದೇಶಾದ್ಯಂತ ಹಿಂದೂಗಳ ಮೇಲೆ ಹಿಂಸಾತ್ಮಕ ದಾಳಿಗಳು ನಡೆಯುತ್ತಿವೆ. ದೇಶದ ಭದ್ರತೆ, ಐಕ್ಯತೆ, ಸಮಗ್ರತೆ ಮತ್ತು ಶಾಂತಿಯನ್ನು ಹಾಳು ಮಾಡುವ ಪ್ರಯತ್ನ ನಡೆಯುತ್ತಿದೆ. ಹಿಂಸಾಚಾರದಲ್ಲಿ ಪ್ರಾಣ ಕಳೆಕೊಂಡ ಹಿಂದೂಗಳಿಗೆ ತಲಾ 10 ಲಕ್ಷ ರೂಪಾಯಿಗಳ ಪರಿಹಾರ ನೀಡಬೇಕು. ಅವರ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕು. ಅಲ್ಲದೆ ಸಂತ್ರಸ್ಥರ ಕುಟುಂಬದ ಮಕ್ಕಳ ಶಿಕ್ಷಣದ ಹೊರೆಯನ್ನು ಸರ್ಕಾರವೇ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಮನವಿ ಸಲ್ಲಿಕೆ ಸಂದರ್ಭ ಹಿಂದೂ ಜನಜಾಗೃತಿ ಸಮಿತಿ ಸದಸ್ಯರಾದ ಪ್ರದೀಪ್ ಕುಮಾರ್, ರವಿ, ಕುಮಾರ್, ಶಶಿಧರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net