ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ

HUN-DEC-28-7(RAITHA SANGH PROTEST)
Published on

ಯಳಂದೂರು : ತಾಲೂಕಿನ ಬಿಆರ್‌ಟಿ ಹುಲಿ ರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಉಪಟಳ ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ರೈತ ಸಂಘದ ಕಾರ್ಯಕರ್ತರು ಬುಧವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಪಟ್ಟಣದ ಅರಣ್ಯ ಇಲಾಖೆಯ ಕಚೇರಿಯ ಬಳಿ ಜಮಾವಣೆಗೊಂಡ ರೈತರು, ಅರಣ್ಯ ಇಲಾಖೆಯ ಧೋರಣೆ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟಿಸಿದರು. ನಂತರ ಇದರ ಮುಂಭಾಗದಲ್ಲೇ ಇರುವ ರಾಷ್ಟ್ರೀಯ ಹೆದ್ದಾರಿ-209ಅನ್ನು ತಡೆದು ಪ್ರತಿಭಟಿಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ಯಳಂದೂರು ತಾಲೂಕಿನ ಬಹುತೇಕ ಹಳ್ಳಿಗಳು ಕಾಡಂಚಿನ ಗ್ರಾಮಗಳಾಗಿವೆ. ಎಲ್ಲಿ ನಿತ್ಯ ರೈತರ ಜಮೀನುಗಳಿಗೆ ಆನೆ, ಜಿಂಕೆ, ನವಿಲು, ಕಡವೆ, ಕಾಡುಹಂದಿ ಸೇರಿದಂತೆ ಅನೇಕ ಪ್ರಾಣಿಗಳು ಲಗ್ಗೆ ಇಟ್ಟು ರೈತರು ಕಷ್ಟಪಟ್ಟು ಬೆಳೆದ ಫಸಲನ್ನು ಭಕ್ಷಿಸುತ್ತಿವೆ. ಇದರಿಂದ ಲಕ್ಷಾಂತರ ರೂ. ನಷ್ಟವಾಗುತ್ತಿದೆ. ರೈತರು ಸಾಲ ಮಾಡಿ ಬೆಳೆ ಬೆಳೆದರೂ ಲಾಭ ಲಭಿಸುತ್ತಿಲ್ಲ. ಸಾಲದ ಶೂಲಕ್ಕೆ ರೈತರನ್ನು ತಳ್ಳುವ ಕೆಲಸಕ್ಕೆ ಅರಣ್ಯ ಇಲಾಖೆ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net