

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ವಿದ್ಯಾಗಿರಿ ಜೆ.ಎಸ್.ಎಸ್ ಪದವಿ ಕಾಲೇಜಿನ ರಸಾಯನಶಾಸ್ತç ವಿಭಾಗದ ಉಪನ್ಯಾಸಕರಾದ ಡಾ. ವೆಂಕಟೇಶ ಮುತಾಲಿಕ ಹಾಗೂ ಡಾ. ಅರುಣ ಶಿರಹಟ್ಟಿ ಅವರು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗಾಗಿ ಕನ್ನಡದಲ್ಲಿ ಬರೆದ `ರಾಸಾಯನಿಕ ಬಂಧುಗಳು' ಪುಸ್ತಕವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತೆ ಜಯಶ್ರೀ ಶಿಂತ್ರಿ ಮಂಗಳವಾರ ಬಿಡುಗಡೆಗೊಳಿಸಿದರು. ಜೆ.ಎಸ್.ಎಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ, ಬಿಇಒಗಳಾದ ಗಿರೀಶ ಪದಕಿ, ಉಮೇಶ ಬಮ್ಮಕ್ಕನ್ನವರ, ಜೆ.ಎಸ್.ಎಸ್ ಐ.ಟಿ.ಐ ಕಾಲೇಜಿನ ಪ್ರಾಚಾರ್ಯ ಮಹಾವೀರ ಉಪಾಧ್ಯೆ, ಇತರರಿದ್ದರು.