ರಾಹುಲ್ ಗಾಂಧಿ ಅಪ್ರಬುದ್ಧ ನಾಯಕ

bkt-13-7
ಬಾಗಲಕೋಟೆ ನಗರದ ಜಿಲ್ಲಾಡಳಿತ ಭವನ ಎದುರು ಬಿಜೆಪಿ ಎಸ್ಸಿ ಮೋರ್ಚಾ ನೇತೃತ್ವದಲ್ಲಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು. ಮುಖಂಡರಾದ ಶಾಂತಗೌಡ ಪಾಟೀಲ, ಮುತ್ತಣ್ಣ ಬೆಣ್ಣೂರ, ಸಾಬು ದೊಡ್ಡಮನಿ, ವೀರಣ್ಣ ಹಳೇಗೌಡರ, ರಾಜು ನಾಯ್ಕರ, ಸವಿತಾ ಲೆಂಕೆನ್ನವರ, ಶೋಭಾ ರಾವ, ಬಸವರಾಜ ಹುನಗುಂದ ಇತರರು ಇದ್ದರು.
Published on

ಬಾಗಲಕೋಟೆ: ಮೀಸಲಾತಿ ವಿಚಾರದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಬಿಜೆಪಿ ಎಸ್ಸಿ ಮೋರ್ಚಾ ನೇತೃತ್ವದಲ್ಲಿ ಕಾರ್ಯಕರ್ತರು ಜಿಲ್ಲಾಡಳಿತ ಭವನ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಽ ವಿರುದ್ಧ ಘೋಷಣೆ ಕೂಗಿದರು. ಬಳಿಕ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ವಾಷಿಂಗಟನ್ ಬಿಸಿಯಲ್ಲಿ ನಡೆದ ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಭಾರತದಲ್ಲಿ ಇನ್ನೆಷ್ಟು ದಿನ ಮೀಸಲಾತಿ ಇರುತ್ತದೆ ಎಂಬ ಪ್ರಶ್ನೆಗೆ ಮುಂದಿನ ದಿನಮಾನದಲ್ಲಿ ರದ್ದುಪಡಿಸುವುದಾಗಿ ರಾಹುಲ್ ಗಾಂಧಿ ಅವರು ಹೇಳಿಕ್ಕೆ ನೀಡಿದ್ದಾರೆ. ಕೂಡಲೇ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದರು.

ಮುಖಂಡ ಅಶೋಕ ಲಿಂಬಾವಳಿ ಅವರು ಮಾತನಾಡಿ, ರಾಹುಲ್ ಗಾಂಧಿ ಅಪ್ರಬುದ್ಧ ನಾಯಕ. ಆತನಿಗೆ ಬುದ್ಧಿಮಟ್ಟವೂ ಕಡಿಮೆಯಿದ್ದು, ಸದಾ ದೇಶ ವಿರೋಧಿ, ಸಂವಿಧಾನ ವಿರೋಧಿ ಮಾತುಗಳನ್ನು ಆಡುತ್ತಾರೆ. ಅವರನ್ನು ಭಾರತದಿಂದ ತಕ್ಷಣವೇ ಗಡಿಪಾರುಗೊಳಿಸಬೇಕು ಎಂದು ಒತ್ತಾಯ ಮಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಟಿ.ಪಾಟೀಲ ಅವರು ಮಾತನಾಡಿ, ವಿದೇಶಿ ಮಹಿಳೆಯ ಮಗ ಎಂದಿಗೂ ದೇಶ ಭಕ್ತನಾಗಲಾರ ಎಂದು ಚಾಣಕ್ಯ ಹೇಳಿದ್ದಾನೆ. ರಾಹುಲ್ ಗಾಂಽಗೆ ದೇಶಭಕ್ತಿ ಇಲ್ಲ, ಕೂಡಲೇ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅರ್ನಹಗೊಳಿಸಬೇಕೆಂದು ಆಗ್ರಹಿಸಿದರು.

ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷ ಮುತ್ತಣ್ಣ ಬೆಣ್ಣೂರ ಮಾತನಾಡಿ, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಮೊದಲಿನಿಂದಲೂ ಸಂವಿಧಾನ ವಿರೋಧಿ ಮನಸ್ಥಿತಿಯನ್ನು ಬೆಳೆಸಿಕೊಂಡು ಬಂದಿದೆ. ಮೀಸಲಾತಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಬಾಬಾಸಾಹೇಬ್ ಅಂಬೇಡ್ಕರ್ ಅವರು ದಮನಿತರಿಗೆ ಧ್ವನಿಯಾಗಿ ಮೀಸಲಾತಿ ಕಲ್ಪಿಸಿದ್ದಾರೆ. ರಾಹುಲ್ ಗಾಂಽ ಕೂಡಲೇ ಬೇಷರತ್ ಕ್ಷಮೆಯಾಚಿಸಬೇಕು ಎಂದು ಹೇಳಿದರು.

ಬಿಟಿಡಿಎ ಮಾಜಿ ಸದಸ್ಯ ಶಿವಾನಂದ ಟವಳಿ ಮಾತನಾಡಿ, ಅಹಿಂದ ನಾಯಕ ಎಂದು ಪದೇ, ಪದೆ ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಹೇಳಿಕೆಯ ಸಮರ್ಥನೆಗೆ ನಿಂತಿರುವುದು ನಾಚಿಗೇಡಿನ ಸಂಗತಿ. ರಾಜ್ಯ ದಲಿತ ಸಂಘಟನೆಗಳು ಈ ವಿಚಾರದಲ್ಲಿ ಮೌನ ವಹಿಸದೆ ಕೂಡಲೇ ಹೋರಾಟಕ್ಕೆ ಮುಂದಾಗಬೇಕು. ರಾಹುಲ್ ಗಾಂಽ ಹೇಳಿಕೆಯನ್ನು ಖಂಡಿಸಬೇಕು ಎಂದು ತಿಳಿಸಿದರು.

ಎಸ್‌ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಸಾಬು ದೊಡ್ಡಮನಿ, ಬಿಜೆಪಿ ವಿಭಾಗ ಸಹ ಪ್ರಭಾರಿ ಬಸವರಾಜ ಯಂಕಂಚಿ, ಮುಖಂಡ ವೀರಣ್ಣ ಹಳೇಗೌಡರ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ನಗರಸಭೆ ಅಧ್ಯಕ್ಷೆ ಸವಿತಾ ಲೆಂಕಣ್ಣವರ, ಉಪಾಧ್ಯಕ್ಷೆ ಶೋಭಾ ರಾವ್, ಶಂಕರ ಗಲಗ, ಬಿಜೆಪಿ ನಗರ ಘಟಕದ ಅಧ್ಯಕ್ಷ ಬಸವರಾಜ ಹುನಗುಂದ, ಪ್ರಧಾನ ಕಾರ್ಯದರ್ಶಿಗಳಾದ ಉಮೇಶ ಹಂಚಿನಾಳ, ಶ್ರೀಧರ ನಾಗರಬೆಟ್ಟ, ನಗರಸಭೆ ಸದಸ್ಯರಾದ ಯಲ್ಲಪ್ಪ ನಾರಾಯಣಿ, ವೀರಪ್ಪ ಶಿರಗಣ್ಣವರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net