ರಾಹುಲ್ ವಿರುದ್ಧ ರಾಜಕೀಯ ಧ್ವೇಷ ಸಲ್ಲ

bkt-8-1
ಬಾಗಲಕೋಟೆ ನಗರದ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
Published on

ಬಾಗಲಕೋಟೆ: ಕೇಂದ್ರ ಬಿಜೆಪಿ ಸರ್ಕಾರ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಽ ವಿರುದ್ಧ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಜಿಲ್ಲಾ ಘಟಕದ ನೇತೃತ್ವದಲ್ಲಿ ಬಸವೇಶ್ವರ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾ ಮೆರವಣಿಗೆ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾನವ ಸರಪಳಿ ಮಾಡಿ ರಸ್ತೆ ತಡೆ ನಡೆಸಿ ಕಿಡಿಕಾರಿಕಾರಿದರು. ರಸ್ತೆ ತಡೆ ಮಾಡಿದ್ದ ವಾಹನ ಸಂಚಾರಕ್ಕೆ ಅಡೆತಡೆ ಉಂಟಾಗಿತ್ತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ ಹದ್ಲಿ ಮಾತನಾಡಿ, ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಽ ದೇಶದ ಒಳಿತಿಗಾಗಿ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡುತ್ತಿದ್ದಾರೆ. ರಾಜಕೀಯ ಟೀಕೆ, ಟಿಪ್ಪಣಿಗಳು ಸಹಜವಾಗಿ ಮಾಡಿದ್ದಾರೆ. ಆದರೇ ಪ್ರಶ್ನೆಗಳಿಗೆ ಉತ್ತರಿಸಲಾಗದ ಕೇಂದ್ರ ಬಿಜೆಪಿ ಸರ್ಕಾರ ರಾಜಕೀಯ ಧ್ವೇಷ ಸಾಧಿಸುತ್ತಿದೆ. ಇಂತಹ ರಣಹೇಡಿ ಕೆಲಸ ಮಾಡುವುದು ತರವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಹುಲ್ ಗಾಂಧಿ ಮಾತನಾಡಿದ್ದು ಕರ್ನಾಟಕದಲ್ಲಿ ಆದರೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುಜರಾತನಲ್ಲಿ ಪ್ರಕರಣ ದಾಖಲಿಸುವಂತೆ ನೋಡಿಕೊಂಡಿದ್ದಾರೆ. ಅಲ್ಲದೆ ನ್ಯಾಯಾಲಯದ ಮೇಲೆ ಒತ್ತಡ ಹಾಕಿ ನ್ಯಾಯಾಂಗ ವ್ಯವಸ್ಥೆ ದುರುಪಯೋಗ ಪಡಿಸಿಕೊಂಡಿದ್ದಾರೆ. ಹೈಕೋರ್ಟ್ ಮೇಲೆ ಒತ್ತಡ ಹಾಕಿ ರಾಹುಲ್ ಗಾಂಧಿ ವಿರುದ್ಧ ತೀರ್ಪು ಬರುವಂತೆ ನೋಡಿಕೊಂಡಿದ್ದಾರೆ. ಇಂತಹ ರಾಜಕೀಯ ನಾಟಕ ಬಹಳ ದಿನ ನಡೆಯುವದಿಲ್ಲ. ಅಧಿಕಾರದಲ್ಲಿ ಯಾರು ಶಾಶ್ವತವಾಗಿ ಇರುವದಿಲ್ಲ. ಇದನ್ನು ನೆನಪಿಟ್ಟುಕೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೋರಾಟಗಾರ ಕುತುಬುದ್ಧೀನ್ ಖಾಜಿ ಮಾತನಾಡಿ, ದೇಶದಲ್ಲಿ ಸಾಮಾಜಿಕ, ಆರ್ಥಿಕ, ನ್ಯಾಯಾಂಗ, ಶಾಸಕಗಾಂಗ, ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ದೇಶಕ್ಕೆ ಸಂಬಂಧಪಟ್ಟ ಪ್ರಶ್ನೆ ಮಾಡುವುದು ಕೂಡಾ ದೇಶ ವಿರೋಧಿ ಅಂತ ಬಿಂಬಿಸಲು ಹೋರಟಿದ್ದಾರೆ ಬಿಜೆಪಿ ನಾಯಕರು. ಇಂತಹ ಗೊಡ್ಡು ಬೆದರಿಕೆಗೆ ಯಾರು ಹೆದರುವದಿಲ್ಲ. ಇದೇ ರೀತಿ ಮುಂದುವರೆದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮುಖಂಡರಾದ ಭರತ ಈಟಿ, ಮುತ್ತು ಜೋಳದ, ಸಂಜೀವ ವಾಡ್ಕರ, ಶ್ರೀನಿವಾಸ ಬಳ್ಳಾರಿ, ಹನುಮಂತ ರಾಕುಂಪಿ, ಎಚ್.ಬಿ.ಗೊರವರ, ಶೈಲಜಾ ನಾಯಕ, ಮಂಜುಳಾ ಭೂಸಾರೆ, ಎಸ್.ಎನ್.ರಾಂಪೂರ, ಮನೋಹರ ಏಳ್ಳಮ್ಮಿ, ದ್ಯಾಮಣ್ಣ ಗಾಳಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net