ರಾಹುಲ್ ಸಂಸದ ಸ್ಥಾನ ಅನರ್ಹ ಖಂಡಿಸಿ ಪ್ರತಿಭಟನೆ

30 mlv 4
ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಅನರ್ಹಗೊಳಿಸಿರುವುದನ್ನು ಖಂಡಿಸಿ ಮಳವಳ್ಳಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡ ಡಾ.ಮೂರ್ತಿ ಅಂಬೇಡ್ಕರ್ ನೇತೃತ್ವದಲ್ಲಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು. ಜಯಮ್ಮ, ಚೊಟ್ಟನಹಳ್ಳಿ ರಮೇಶ್, ಯತ್ತಂಬಾಡಿ ಪುಟ್ಟರಾಮು, ಮಹದೇವಸ್ವಾಮಿ ಇದ್ದರು.
Published on

ಮಳವಳ್ಳಿ: ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಮುಖಂಡ ಡಾ.ಮೂರ್ತಿ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಗುರುವಾರ ಕಪ್ಪುಪಟ್ಟಿ ಧರಿಸಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.
ಡಾ.ಮೂರ್ತಿ ಮಾತನಾಡಿ, ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ರದ್ದು ಪಡಿಸುವ ಮೂಲಕ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಬಿಜೆಪಿ ವಾಕ್ ಸ್ವಾತಂತ್ರ್ಯವನ್ನು ದಮನಗೊಳಿಸುವ ಮೂಲಕ ಸಂವಿಧಾನದ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಕಿಡಿ ಕಾರಿದರು.
ಕಾಂಗ್ರೆಸ್ ಪಕ್ಷದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಡಾ.ಜಿ.ಪರಮೇಶ್ವರ ಹಾಗೂ ಮಲ್ಲಿಕಾರ್ಜುನ ಖರ್ಗೆ ಇದ್ದರೂ ಮಾಜಿ ಶಾಸಕರೊಬ್ಬರು ಸಮಯೋಚಿತ ಸಮರ್ಥ ದಲಿತ ನಾಯಕರಿಲ್ಲ ಎಂದು ಹೇಳಿರುವುದು ಬೇಸರದ ಸಂಗತಿ ಎಂದು ಸ್ವಪಕ್ಷೀಯ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ವಿರುದ್ಧ ಕಿಡಿಕಾರಿದರು.

ಇದೇ ಸಂದರ್ಭದಲ್ಲಿ ರಾಜ್ಯ ಮಹಿಳಾ ಕಾರ್ಯದರ್ಶಿ ಜಯಮ್ಮ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಚೊಟ್ಟನಹಳ್ಳಿ ರಮೇಶ್, ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಯತ್ತಂಬಾಡಿ ಪುಟ್ಟರಾಮು, ಜಿಪಂ ಮಾಜಿ ಸದಸ್ಯ ಮಹದೇವಸ್ವಾಮಿ, ಡಿ.ಕೆ.ಶಿ ಅಭಿಮಾನಿ ಸಂಘದ ಅಧ್ಯಕ್ಷ ಲಿಂಗಪಟ್ಟಣ ಗಂಗಾಧರ್, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಚೌಡೇಶ್, ಪುರಸಭೆ ಮಾಜಿ ಸದಸ್ಯ ಗಂಗಾಧರ್ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net