ರಾಹುಲ್ ಹೇಳಿಕೆ ತಿರುಚಿದ ಬಿಜೆಪಿ

D G SAGAR new
Published on

ಕಲಬುರಗಿ: ಲೋಕಸಭೆ ಪ್ರತಿ ಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮೀಸಲಾತಿ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ, ಜೆಡಿಎಸ್ ಸುಳ್ಳು ಹೇಳಿ ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ. ಬಿಜೆಪಿ ಸಾಂಪ್ರದಾಯಿಕವಾಗಿಯೇ ಸಂವಿಧಾನವನ್ನು ವಿರೋಧಿಸುತ್ತಿದೆ ಎಂದು ದಲಿತ ಸಂಘರ್ಷ ಸಮಿತಿ ಸಂಚಾಲಕ ಡಿ.ಜಿ.ಸಾಗರ ಖಂಡಿಸಿದರು.
ಸAವಿಧಾನವನ್ನೇ ಬದಲಾಯಿಸಲು ಹೊರಟವರಿಗೆ ಪ್ರತಿಭಟನೆಯ ನೈತಿಕತೆ ಇಲ್ಲ. ರಾಹುಲ್ ಗಾಂಧಿ ಅವರ ಹೇಳಿಕೆ ಅರ್ಥೈಸಿಕೊಳ್ಳುವ ವ್ಯವಧಾನ, ಜ್ಞಾನ ಇಲ್ಲ. ಬಿಜೆಪಿ ಮತ್ತು ಸಂಘ ಪರಿವಾರ ಕಾಲ ಕಾಲಕ್ಕೆ ಮೀಸಲಾತಿ ವಿರೋಧಿಸುತ್ತಲೇ ಬಂದಿವೆ. ಮೀಸಲಾತಿ ಬಗ್ಗೆ ಅಷ್ಟು ಕಾಳಜಿ ಇದ್ದರೆ ಶೇ.೭೫ ಮೀಸಲು ಜಾರಿ ತರಲಿ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಪ್ರಸ್ತುತ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿರುವ ಒಂದು ದೇಶ ಒಂದು ಚುನಾವಣೆ ಪ್ರಸ್ತಾಪ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಅನುಷ್ಠಾನ ಕಷ್ಟಕರವಾಗಿದೆ. ತರಾತುರಿಯಲ್ಲಿ ಅನುಷ್ಠಾನಕ್ಕೆ ಹೊರಟಿರುವುದು ಸರಿಯಲ್ಲ. ಜಾತಿ ನಿಂದೆ, ಜೀವ ಬೆದರಿಕೆ ಆರೋಪ ಹೊತ್ತ ರಾಜರಾಜೇಶ್ವರಿ ಶಾಸಕ ಮುನಿರತ್ನ ಅವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.
ಒಂದು ದೇಶ ಒಂದು ಚುನಾವಣೆ ವಿಷಯ ಚರ್ಚಿಸದೆ ಏಕಾ ಏಕಿ ಜಾರಿ ಮಾಡಲು ಹೊರಟಿರುವ ಕೇಂದ್ರದ ಬಿಜೆಪಿ ಸರ್ಕಾರದ ನಡೆ ವಿರೋಧಿಸಿ, ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸೆ.೨೬ರಂದು ಧರಣಿ ನಡೆಸಲಾಗುವುದು ಎಂದು ಹೇಳಿದರು.
ಪ್ರಮುಖರಾದ ಸುರೇಶ ಹಾದಿಮನಿ, ಬಿ.ಸಿ.ವಾಲಿ, ಎಚ್.ಶಂಕರ, ಕೃಷ್ಣಪ್ಪ ಕರಣಿಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net