

ಚಿತ್ರದುರ್ಗ: ಕೇಂದ್ರ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರಬುದ್ಧ ರಾಜಕಾರಣಿಯಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, ತಿರುಪತಿ ಲಡ್ಡು ಕುರಿತಂತೆ ಮಾಜಿ ಸಂಸದ ಪ್ರತಾಪ್‌ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಉದ್ದಟತನ ಹೇಳಿಕೆಗಳನ್ನು ಕೊಡುತ್ತಾರೆ ಎಂಬ ಕಾರಣಕ್ಕೆ ಬಿಜೆಪಿ ಅವರಿಗೆ ಲೋಕಸಭಾ ಟಿಕೆಟ್ ನಿರಾಕರಿಸಿದೆ ಎಂದರು.
ರಾಜ್ಯಪಾಲರ ಕಚೇರಿ ದುರ್ಬಳಕೆ ಆಗುತ್ತಿದೆ. ಅನಾಮಧೇಯ ಪತ್ರ ಬಂದರೂ ಪರಿಶೀಲನೆಗೆ ರಾಜ್ಯಪಾಲರು ಸೂಚಿಸುತ್ತಿದ್ದಾರೆ. ಸಿಎಂ ಕಚೇರಿಯಿಂದ ಯಾವುದೇ ಮಾಹಿತಿ ಸೋರಿಕೆಯಾಗಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಆರ್ಕಾವತಿ ವಿಚಾರದಲ್ಲಿ ರಿಡ್ಯೂ ಆಗಿಲ್ಲ, ಸುಪ್ರೀಂ ಕೋರ್ಟ್ ಸೂಚನೆಯಾಗಿದೆ. ಎತ್ತಿನಹೊಳೆ ಯೋಜನೆಯಿಂದ ಸದ್ಯದಲ್ಲೇ ಹಿರಿಯೂರಿನ ವಾಣಿ ವಿಲಾಸ ಸಾಗರಕ್ಕೆ 3-5 ಟಿಎಂಸಿ ಅಡಿ ನೀರು ಬರಲಿದೆ ಎಂದರು.