ರು.10 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ

klb1
ಆಳಂದ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಸಲಹೆಗಾರ ಬಿ.ಆರ್.ಪಾಟೀಲ್ ಚಾಲನೆ ನೀಡಿದರು. ಸಿ.ಜಿ.ಹಳ್ಳದ, ಅರವಿಂದ ಭಾಸಗಿ, ಮಲ್ಲಿನಾಥ ಖಜೂರಿ, ವಿನೋದ ಕುಲಕರ್ಣಿ ಇತರರಿದ್ದರು.
Published on

ಆಳಂದ: ಪಟ್ಟಣದಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಕ್ಕೆ 10 ಕೋಟಿ ರೂ. ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದು, ಮುಖ್ಯಮಂತ್ರಿಗಳಿAದ ಅನುಮೋದನೆ ಸಿಕ್ಕ ಕೂಡಲೇ ಕಾಮಗಾರಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಲಹೆಗಾರ ಬಿ.ಆರ್.ಪಾಟೀಲ್ ತಿಳಿಸಿದರು.

ಮಟಕಿ ರಸ್ತೆಯಲ್ಲಿರುವ ಕ್ರೀಡಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ 2024-25ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರತಿ ಶಾಲೆಗಳಲ್ಲಿ ಎನ್‌ಎಸ್‌ಎಸ್ ಘಟಕ ಸ್ಥಾಪಿಸಬೇಕು, ಜತೆಗೆ ಪರಿಸರ ಬೆಳೆಸುವ ಕೆಲಸ ಆಗಬೇಕು. ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಆಟೋಟಗಳಲ್ಲು ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.

ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಸದೃಢ ಆರೋಗ್ಯದ ಜತೆಗೆ ಬಲಿಷ್ಠ ದೇಹ ಹೊಂದಲು ಸಾಧ್ಯ. ಇಂದಿನ ಕ್ರೀಡಾಕೂಟದಲ್ಲಿ 32 ತಂಡಗಳು ಪಾಲ್ಗೊಂಡಿರುವುದು ಖುಷಿ ತಂದಿದೆ. ಆಟಗಳಲ್ಲಿ ಸೋಲು- ಗೆಲುವು ಸಹಜ, ಸೋತಾಗ ಕುಗ್ಗದೆ, ಗೆದ್ದಾಗ ಹಿಗ್ಗದೆ ಮುಂದೆ ಸಾಗಬೇಕು. ಪ್ರತಿಯೊಬ್ಬರೂ ಸ್ಪರ್ಧೆಗಳಲ್ಲಿ ಭಾಗಿಯಾಗಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ.ಹಳ್ಳದ, ದೈಹಿಕ ಶಿಕ್ಷಣಾಧಿಕಾರಿ ಅರವಿಂದ ಭಾಸಗಿ, ಪಿಎಸ್‌ಐ ಭೀಮರಾವ ಬಂಕ್ಲಿ, ಪ್ರಮುಖರಾದ ಮಹಾಂತೇಶ ಪಾಟೀಲ್, ವಿನೋದ ಕುಲಕರ್ಣಿ, ಮಲ್ಲಿಕಾರ್ಜುನ ಖಜೂರಿ, ನರಸಪ್ಪ ಬಿರಾದಾರ, ಶಿವಬಸಪ್ಪ ಟಕ್ಕಳಕಿ, ಜಿತೇಂದ್ರ ತಳವಾರ, ದತ್ತಪ್ಪ ಸುಳ್ಳನ, ಮಹಾದೇವ ಗುಣಕಿ, ಲಕ್ಷ್ಮೀಕಾಂತ ಬೀದಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net