ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನಕ್ಕೆ ಒತ್ತಾಯ

CTD 19 Sardhar Sevalal Swamiji--04
Published on

ಚಿತ್ರದುರ್ಗ: ಬಂಜಾರ ಸಮುದಾಯದ ಪ್ರಭಾವಿ ನಾಯಕ ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ನೀಡಬೇಕು ಎಂದು ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಎಐಸಿಸಿ, ಕೆಪಿಸಿಸಿಗೆ ಒತ್ತಾಯಿಸಿದ್ದಾರೆ.

ಈ ಹಿಂದೆ ರಾಜ್ಯದಲ್ಲಿ ಆಡಳಿತ ನಡೆಸಿ ಮೀಸಲಾತಿ ವರ್ಗೀಕರಣಕ್ಕೆ ಕೈಹಾಕಿದ ಬಿಜೆಪಿಗೆ ಇಡೀ ಬಂಜಾರ ಸಮಾಜ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಸಮುದಾಯದ ಕೊಡುವೆಯೂ ಇದ್ದು, ರುದ್ರಪ್ಪ ಲಮಾಣಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ತಾಂಡಾ ಅಭಿವೃದ್ದಿ ನಿಗಮಕ್ಕೆ ನಮ್ಮ ಸಮಾಜದ ಚಿಂತಕರು, ಹೋರಾಟಗಾರರ ಪೈಕಿ ಸೂಕ್ತರನ್ನು ಗುರುತಿಸಿ ನೇಮಕ ಮಾಡಬೇಕು ಎಂದು ಸ್ವಾಮೀಜಿ ಆಗ್ರಹಿಸಿದ್ದಾರೆ.

ಲಮಾಣಿಗೆ ಸಮಾಜ ಕಲ್ಯಾಣ ಖಾತೆಯನ್ನೇ ನೀಡಿ, ಸಾಮಾಜಿಕ ನ್ಯಾಯ ಕಲ್ಪಿಸಬೇಕು ಎಂದು ಲಂಬಾಣಿ ಬಂಜಾರ ಸಮಾಜದ ಜಿಲ್ಲಾಧ್ಯಕ್ಷ ಎಂ.ಸತೀಶ್‌ಕುಮಾರ್ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net