ರೇಣುಕನಗರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ

bhr road
ಬಿ.ಕಣಬೂರು ಗ್ರಾಪಂ ರೇಣುಕನಗರದ ಮೂರನೇ ಅಡ್ಡರಸ್ತೆಯ ಕಾಂಕ್ರೀಟ್ ರಸ್ತೆಯ ಕ್ಯೂರಿಂಗ್‌ನ್ನು ಸ್ಥಳೀಯರೇ ನಿರ್ವಹಿಸುತ್ತಿರುವುದು.
Published on

ಬಾಳೆಹೊನ್ನೂರು: ಬಿ.ಕಣಬೂರು ಗ್ರಾಮ ಪಂಚಾಯಿತಿ ರೇಣುಕನಗರದ ಮೂರನೇ ಅಡ್ಡ ರಸ್ತೆಗೆ ಶಾಸಕ ಟಿ.ಡಿ.ರಾಜೇಗೌಡ ಸಹಕಾರದಲ್ಲಿ ಅಲ್ಪಸಂಖ್ಯಾತ ಅಭಿವೃದ್ಧಿ ನಿಧಿಯಡಿ ಕಾಂಕ್ರಿಟೀಕರಣ ಕಾಮಗಾರಿ ನಡೆಸಲಾಗುತ್ತಿದೆ.

ಸೋಮವಾರ ಕಾಂಕ್ರಿಟೀಕರಣ ಕಾಮಗಾರಿ ಆರಂಭಗೊಂಡಿದ್ದು, ಮಂಗಳವಾರದ ವೇಳೆಗೆ ಮೂರನೇ ಅಡ್ಡ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಸಂಪೂರ್ಣಗೊಂಡಿದೆ. ಗ್ರಾಮಸ್ಥರ ಹಲವು ದಿನಗಳ ಬೇಡಿಕೆಯನ್ನು ಶಾಸಕ ಟಿ.ಡಿ.ರಾಜೇಗೌಡ ನೇತೃತ್ವದಲ್ಲಿ ಪೂರೈಸಲಾಗಿದ್ದು, ಕಾಮಗಾರಿ ಶಾಶ್ವತವಾಗಿ ಅಚ್ಚುಕಟ್ಟಾಗಿರಬೇಕು ಎಂಬ ಉದ್ದೇಶದಿಂದ ಕಾಂಕ್ರಿಟೀಕರಣಗೊಂಡ ರಸ್ತೆಯ ಕ್ಯೂರಿಂಗ್ ವ್ಯವಸ್ಥೆಯನ್ನು ಸ್ಥಳೀಯರೇ ಮಾಡುತ್ತಿದ್ದಾರೆ.

ಗುತ್ತಿಗೆದಾರರೊಂದಿಗೆ ಕೈಜೋಡಿಸಿರುವ ಸ್ಥಳೀಯ ನಿವಾಸಿಗಳು ಕಾಮಗಾರಿ ನಡೆದ ಸ್ಥಳದಲ್ಲಿ ಬೆಳಗ್ಗೆ ಮತ್ತು ಸಂಜೆ ನೀರು ಹಾಕಿ ಕ್ಯೂರಿಂಗ್ ಮಾಡುತ್ತಿದ್ದು, ಕಾಮಗಾರಿ ಹಾಳಾಗದಂತೆ ಎಚ್ಚರ ವಹಿಸಿದ್ದಾರೆ. ರಸ್ಯೆ ಸಂಪೂರ್ಣ ಕ್ಯೂರಿಂಗ್ ಆಗುವವರೆಗೂ ಯಾವುದೇ ವಾಹನಗಳು ಸಂಚರಿಸದಂತೆಯೂ ಎರಡೂ ಬದಿಗಳಲ್ಲಿ ಮಾರ್ಗವನ್ನು ಗ್ರಾಮಸ್ಥರೇ ಸ್ವಯಂಪ್ರೇರಿತವಾಗಿ ಬಂದ್ ಮಾಡಿದ್ದಾರೆ.

ಗುತ್ತಿಗೆದಾರರೊಂದಿಗೆ ಕೈಜೋಡಿಸಿ ಕಾಮಗಾರಿ ಗುಣಮಟ್ಟ ಕಾಪಾಡಲು ಸಹಕರಿಸುತ್ತಿರುವ ಸ್ಥಳೀಯರನ್ನು ಬಿ.ಕಣಬೂರು ಗ್ರಾಪಂ ಅಧ್ಯಕ್ಷ ರವಿಚಂದ್ರ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net