

ಬಾಗಲಕೋಟೆ: ಲೋಕಸಭಾ ಚುನಾವಣೆ-೨೦೨೪ರ ನೀತಿ ಸಂಹಿತೆ ಹಿನ್ನಲೆಯಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು. ಉಪವಿಭಾಗಧಿಕಾರಿ ಸಂತೋಷ ಜಗಲಾಸರ ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ಅರ್ಪಿಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪೂರ ಸೇರಿದಂತೆ ಸಮುದಾಯದ ಮುಖಂಡರು ಇದ್ದರು.