ರೇಣುಕಾಚಾರ್ಯರ ಜಯಂತಿ ಅರ್ಥಪೂರ್ಣ ಆಚರಿಸಿ

Renukacharya Jayanti Samiti Photo-2
Published on

ಬೀದರ್: ಜಗದ್ಗುರು ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಸಮಿತಿಯ ಅಧ್ಯಕ್ಷ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಹೇಳಿದರು.
ಪ್ರಸಕ್ತ ಸಾಲಿನಿಂದ ಸರ್ಕಾರದ ವತಿಯಿಂದಲೇ ಜಯಂತಿ ಆಚರಿಸುತ್ತಿರುವ ಪ್ರಯುಕ್ತ ಇಲ್ಲಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರನ್ನು ಸಮಿತಿ ವತಿಯಿಂದ ಸನ್ಮಾನಿಸಿ ಅವರು ಮಾತನಾಡಿದರು.
ಜಯಂತಿ ವೈಭವದಿಂದ ಆಚರಿಸಲು ಸರ್ವ ಸಮಾಜಗಳ ಮುಖಂಡರು ಕೈಜೋಡಿಸುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದರು.
ಬೇಮಳಖೇಡದ ಡಾ. ರಾಜಶೇಖರ ಶಿವಾಚಾರ್ಯ ಮಾತನಾಡಿ, ಜಯಂತಿ ಆಚರಣೆಯ ಬಹು ದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದೆ ಎಂದು ಹೇಳಿದರು.
ಸಮಿತಿಯ ಉಪಾಧ್ಯಕ್ಷ ವೈಜಿನಾಥ ಕಮಠಾಣೆ ಮಾತನಾಡಿ, ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವ ಪ್ರಯುಕ್ತ ನಡೆಯುವ ಸಾರ್ವಜನಿಕ ಸಮಾರಂಭ ಹಾಗೂ ಮೆರವಣಿಗೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಕಲಬುರಗಿ ವಿಭಾಗ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್ ಮಾತನಾಡಿ, ರೇಣುಕಾಚಾರ್ಯರು ಮನುಕುಲದ ಉದ್ಧಾರಕ್ಕೆ ಶ್ರಮಿಸಿದ್ದರು. ಸರ್ಕಾರದ ವತಿಯಿಂದ ಜಯಂತಿ ಆಚರಿಸುವ ಮೂಲಕ ಅವರಿಗೆ ಗೌರವ ಸಲ್ಲಿಸುತ್ತಿರುವುದು ಸ್ತುತ್ಯಾರ್ಹವಾಗಿದೆ ಎಂದು ನುಡಿದರು.
ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಷ್ಠಾನದ ಅಧ್ಯಕ್ಷ ಶಿವಶರಣಪ್ಪ ವಾಲಿ ಮಾತನಾಡಿ, ರೇಣುಕಾಚಾರ್ಯರ ಜಯಂತಿಯನ್ನು ಕಾಟಾಚಾರಕ್ಕೆ ಆಚರಿಸಬಾರದು. ಎಲ್ಲ ಇಲಾಖೆಗಳಲ್ಲಿ ಅಚ್ಚುಕಟ್ಟಾಗಿ ಆಚರಿಸುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಸಮಿತಿಯ ಕಾರ್ಯಾಧ್ಯಕ್ಷ ಸಿದ್ರಾಮಯ್ಯ ಸ್ವಾಮಿ ಮಾತನಾಡಿ, ಜಯಂತಿಯನ್ನು ಮಾದರಿಯಾಗಿ ಆಚರಿಸಬೇಕು. ಮೆರವಣಿಗೆ ಹಾಗೂ ಸಾರ್ವಜನಿಕ ಸಮಾರಂಭವನ್ನು ಶಿಸ್ತು ಬದ್ಧವಾಗಿ ನಡೆಸಬೇಕು ಎಂದು ಹೇಳಿದರು.
ಸಮಿತಿಯ ಪ್ರಧಾನ ಕಾರ್ಯದರ್ಶಿಯೂ ಆದ ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಮಾತನಾಡಿ, ಶಾಲಾ, ಕಾಲೇಜು, ಸರ್ಕಾರಿ ಕಚೇರಿ, ಸಂಘ, ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಿಸಿ, ವರದಿ ಸಲ್ಲಿಸಲು ಜಿಲ್ಲಾ ಆಡಳಿತ ಆದೇಶ ಹೊರಡಿಸಬೇಕು ಎಂದರು.
ವಿಶ್ವ ಹಿಂದೂ ಪರಿಷತ್ ಉತ್ತರ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಮಕೃಷ್ಣ ಸಾಳೆ, ಡಾ. ರಜನೀಶ್ ವಾಲಿ, ಮುಖಂಡರಾದ ರಾಜಕುಮಾರ ಹೆಬ್ಬಾಳೆ, ವಿರೂಪಾಕ್ಷ ಗಾದಗಿ, ಓಂಪ್ರಕಾಶ ರೊಟ್ಟೆ, ವರದಯ್ಯ ಸ್ವಾಮಿ, ಆಕಾಶ ಪಾಟೀಲ ಚಿಮಕೋಡ್, ಚಂದ್ರಶೇಖರ ಗಾದಾ, ವಿಠ್ಠಲ ಕುಂಬಾರ, ಸಂಗಮೇಶ ಮೂಲಗೆ, ಅಂಬರಿಷ್ ಬಟನಾಪುರೆ ಮೊದಲಾದವರು ಇದ್ದರು. ಇದಕ್ಕೂ ಮುನ್ನ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಎಂ. ಅವರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net